32 ವರ್ಷಕ್ಕೆ ಬದುಕು ಅಂತ್ಯ
ಮುಂಬೈ: ಮಾಡೆಲ್ ಹಾಗೂ ನಟಿ ಪೂನಂ ಪಾಂಡೆ ಗರ್ಭಕೋಶದ ಕ್ಯಾನ್ಸರ್ನಿಂದಾಗಿ ಫೆಬ್ರವರಿ 1ರಂದು ಮೃತಪಟ್ಟಿರುವುದಾಗಿ ಆಕೆಯ ತಂಡ ಶುಕ್ರವಾರ (ಫೆ.02) ಬೆಳಗ್ಗೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಗುರುವಾರ ರಾತ್ರಿ ಪೂನಂ ಪಾಂಡೆ ಸಾವಿಗೀಡಾಗಿದ್ದಾರೆ ಎಂದು ಅವರ ತಂಡ ಮಾಧ್ಯಮಗಳಿಗೆ ಖಚಿತಪಡಿಸಿದೆ. ಕೊನೆಯುಸಿರೆಳೆದಾಗ ಆಕೆ ಹುಟ್ಟೂರಾದ ಉತ್ತರ ಪ್ರದೇಶದ ಕಾನ್ಪುರದಲ್ಲಿದ್ದಳು. ಆಕೆಯ ಅಂತ್ಯಕ್ರಿಯೆಯ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ತಂಡ ಮಾಹಿತಿ ನೀಡಿದೆ.
ಈ ಮುಂಜಾನೆಯು ನಮಗೆ ಕಠಿಣವಾಗಿದೆ. ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು ನಿಮಗೆ ತಿಳಿಸಲು ತುಂಬಾ ದುಃಖವಾಗಿದೆ. ಅವಳೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಂತ ರೂಪವೂ ಶುದ್ಧ ಪ್ರೀತಿ ಮತ್ತು ದಯೆಯಿಂದ ಭೇಟಿಯಾಯಿತು ಎಂದು ಪೂನಂ ಅವರ ಅಧಿಕೃತ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ಇನ್ನು ಪೂನಂ ಪಾಂಡೆಯ ಸಾವಿನ ಸುದ್ದಿಯನ್ನು ಅನೇಕರು ಗಂಭೀರವಾಗಿ ತೆಗೆದುಕೊಂಡಿಲ್ಲ. ಅದರಲ್ಲೂ ಅಭಿಮಾನಿಗಳು ಅಪನಂಬಿಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆಘಾತಕ್ಕೂ ಒಳಗಾಗಿದ್ದಾರೆ. ಕೆಲವರು ಬೇಸರವನ್ನು ವ್ಯಕ್ತಪಡಿಸಿದರೆ, ಕೆಲವರು ಇದು ಪ್ರಚಾರದ ಗಿಮಿಕ್ ಎಂದು ಹೇಳಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಅವರ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಮತ್ತೊಂದು ಪೋಸ್ಟ್ ಬಂದರೂ ಬರಬಹುದು ಎನ್ನುತ್ತಿದ್ದಾರೆ. ಆದರೆ, ಪೂನಂ ಸಾವಿನ ಸುದ್ದಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…