ಹೊಸದಿಲ್ಲಿ: ದೇಶಾದ್ಯಂತ ಇನ್ನು ಮುಂದೆ ಗರ್ಭಿಣಿಯರಿಗೂ ಲಸಿಕೆ ನೀಡುವ ಕಾರ್ಯ ಆರಂಭವಾಗಲಿದೆ. ಈ ಕುರಿತು ಕೇಂದ್ರ ಸರಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, “ಗರ್ಭ ಧರಿಸುವಿಕೆಯು ಕೊರೊನಾ ರಿಸ್ಕ್ ಅನ್ನು ಹೆಚ್ಚಿಸುವುದಿಲ್ಲ’ ಎಂಬುದನ್ನು ಸ್ಪಷ್ಟಪಡಿಸಿದೆ.
ಬಹುತೇಕ ಗರ್ಭಿಣಿಯರಿಗೆ ಸೋಂಕಿಗೊಳಗಾದರೂ ರೋಗಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಆದರೆ ಅವರ ಆರೋಗ್ಯ ಬೇಗನೆ ಹದಗೆಡಬಹುದು. ಹೀಗಾಗಿ ತಮ್ಮನ್ನು ಹಾಗೂ ತಮ್ಮ ಹೊಟ್ಟೆಯಲ್ಲಿರುವ ಮಗುವನ್ನು ರಕ್ಷಿಸಿಕೊಳ್ಳಬೇಕೆಂದರೆ ಅವರು ಲಸಿಕೆ ಪಡೆಯುವುದು ಮುಖ್ಯ ಎಂದು ಸರಕಾರ ತಿಳಿಸಿದೆ.
ಮಾರ್ಗಸೂಚಿಯಲ್ಲೇನಿದೆ?: ಗರ್ಭಿಣಿಯರಿಗೆ ಸೋಂಕು ತಗಲಿದರೂ ಶೇ.90ರಷ್ಟು ಮಂದಿ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲದೇ ಗುಣಮುಖರಾಗಿದ್ದಾರೆ. ಆದರೆ ಗಂಭೀರ ರೋಗ ಲಕ್ಷಣ ಇರುವವರಿಗೆ ಅಪಾಯ ಹೆಚ್ಚಿರುವ ಕಾರಣ, ಅಂಥವರು ಆಸ್ಪತ್ರೆಗೆ ದಾಖಲಾಗಲೇಬೇಕು. ಅತ್ಯಧಿಕ ರಕ್ತದೊತ್ತಡ, ಮಧುಮೇಹ, ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ, ಅತಿಕಾಯ, 35 ವರ್ಷ ಮೇಲ್ಪಟ್ಟವರು ಹೆಚ್ಚಿನ ನಿಗಾ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖೀಸಲಾಗಿದೆ. ಜತೆಗೆ ಕೊರೊನಾ ಸೋಂಕಿತ ತಾಯಿಗೆ ಜನಿಸಿದ ಶೇ.95ರಷ್ಟು ಮಕ್ಕಳು ಆರೋಗ್ಯವಂತರಾಗಿದ್ದಾರೆ. ಕೆಲವೇ ಕೆಲವು ಪ್ರಕರಣಗಳಲ್ಲಿ ಮಾತ್ರ ಅವಧಿ ಪೂರ್ವ ಹೆರಿಗೆ, ಮಗುವಿನ ತೂಕ ಇಳಿಕೆಯಂಥ ಘಟನೆಗಳು ನಡೆದಿವೆ ಎಂದೂ ತಿಳಿಸಲಾಗಿದೆ.
ಎಲ್ಲ ಗರ್ಭಿಣಿಯರೂ ಕೋವಿನ್ ಆ್ಯಪ್ ನಲ್ಲಿ ನೋಂದಣಿ ಮಾಡಿಕೊಂಡು ಅಥವಾ ಲಸಿಕಾ ಕೇಂದ್ರಕ್ಕೆ ನೇರವಾಗಿ ಭೇಟಿ ನೀಡಿ ಲಸಿಕೆ ಪಡೆಯಬಹುದು ಎಂದು ಸರಕಾರ ತಿಳಿಸಿದೆ. ಜತೆಗೆ, ಅವರಿಗೆ ಲಸಿಕೆ ನೀಡುವ ಮುನ್ನ ಆ ಕುರಿತು ಆಪ್ತ ಸಮಾಲೋಚನೆ, ಸೂಕ್ತ ಮಾರ್ಗದರ್ಶನ ನೀಡುವಂತೆ ಮುಂಚೂಣಿ ಕಾರ್ಯಕರ್ತರಿಗೆ ಸೂಚಿಸಲಾಗಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…