ತಿರುವನಂತಪುರಂ: ಅನಾನಾಸಿನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆಯ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆನೆ ಹತ್ಯೆಯಾದ ಒಂದೂವರೆ ವರ್ಷಗಳ ಬಳಿಕ ಎರಡನೇ ಆರೋಪಿ ರಿಯಾಜುದ್ದೀನ್ (38) ಪೊಲೀಸರಿಗೆ ಬಂದು ಶರಣಾಗಿದ್ದಾನೆ.
ಕಾಡು ಹಂದಿಯನ್ನು ಕೊಲ್ಲಲು ರೂಪಿಸಿದ ಬಲೆಗೆ ಆನೆ ಸಿಲುಕಿ ಮೃತಪಟ್ಟಿದ್ದು, ಕೊನೆಗೂ ಘಟನೆಯ ಪಶ್ಚಾತಾಪದಿಂದ ಆರೋಪಿ ಕೇರಳದ ಮುನ್ಸಿಫ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಅ.16ರಂದು ಶರಣಾಗಿದ್ದಾನೆ. ಈತ 2020 ಜೂನ್ ತಿಂಗಳಿನಿಂದ ನಾಪತ್ತೆಯಾಗಿದ್ದ. ಸುಮಾರು ಒಂದೂವರೆ ವರ್ಷದ ಬಳಿಕ ಕೋರ್ಟ್ಗೆ ಶರಣಾಗಿದ್ದಾನೆ.
ಇನ್ನು ರಿಯಾಜುದ್ದೀನ್ ತಂದೆ ಅಬ್ದುಲ್ ಕರೀಮ್ ಪ್ರಕರಣದ ಮೊದಲ ಆರೋಪಿಯಾಗಿದ್ದು, ಈಗಲೇ ನಾಪತ್ತೆಯಾಗಿದ್ದಾರೆ. ಆರೋಪಿ ರಿಯಾಜುದ್ದೀನ್ನನ್ನು ಅರಣ್ಯ ಇಲಾಖೆ ತಮ್ಮ ಕಸ್ಟಡಿಗೆ ತೆಗೆದುಕೊಂಡಿದೆ.
ಗರ್ಭಿಣಿ ಆನೆಯು ಹಸಿವಿನಿಂದ ಸ್ಫೋಟಕ ತುಂಬಿದ ಅನಾನಾಸು ತಿನ್ನಲು ಯತ್ನಿಸಿದಾಗ, ಸ್ಫೋಟಕ ಬಾಯಲ್ಲೇ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ಆನೆ ಕೆಲ ದಿನಗಳವರೆಗೆ ನರಳಿ ಮೃತಪಟ್ಟಿತ್ತು. ಬಳಿಕ ಅದರ ಅಂತಿಮ ಸಂಸ್ಕಾರವನ್ನು ಅರಣ್ಯ ಇಲಾಖೆ ನೆರವೇರಿಸಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…