Featured

ಗರ್ಭಿಣಿ ಆನೆ ಕೊಂದ ಪ್ರಕರಣ : ಒಂದೂವರೆ ವರ್ಷಗಳ ಬಳಿಕ ಪೊಲೀಸರಿಗೆ ಶರಣಾದ ಆರೋಪಿ – Vishwanews24

ಗರ್ಭಿಣಿ ಆನೆ ಕೊಂದ ಪ್ರಕರಣ : ಒಂದೂವರೆ ವರ್ಷಗಳ ಬಳಿಕ ಪೊಲೀಸರಿಗೆ ಶರಣಾದ ಆರೋಪಿ – Vishwanews24

ತಿರುವನಂತಪುರಂ: ಅನಾನಾಸಿನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆಯ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆನೆ ಹತ್ಯೆಯಾದ ಒಂದೂವರೆ ವರ್ಷಗಳ ಬಳಿಕ ಎರಡನೇ ಆರೋಪಿ ರಿಯಾಜುದ್ದೀನ್​ (38) ಪೊಲೀಸರಿಗೆ ಬಂದು ಶರಣಾಗಿದ್ದಾನೆ.

ಕಾಡು ಹಂದಿಯನ್ನು ಕೊಲ್ಲಲು ರೂಪಿಸಿದ ಬಲೆಗೆ ಆನೆ ಸಿಲುಕಿ ಮೃತಪಟ್ಟಿದ್ದು, ಕೊನೆಗೂ ಘಟನೆಯ ಪಶ್ಚಾತಾಪದಿಂದ ಆರೋಪಿ ಕೇರಳದ ಮುನ್ಸಿಫ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ ಮುಂದೆ ಅ.16ರಂದು ಶರಣಾಗಿದ್ದಾನೆ. ಈತ 2020 ಜೂನ್​ ತಿಂಗಳಿನಿಂದ ನಾಪತ್ತೆಯಾಗಿದ್ದ. ಸುಮಾರು ಒಂದೂವರೆ ವರ್ಷದ ಬಳಿಕ ಕೋರ್ಟ್​ಗೆ ಶರಣಾಗಿದ್ದಾನೆ.

ಇನ್ನು ರಿಯಾಜುದ್ದೀನ್​ ತಂದೆ ಅಬ್ದುಲ್​ ಕರೀಮ್​ ಪ್ರಕರಣದ ಮೊದಲ ಆರೋಪಿಯಾಗಿದ್ದು, ಈಗಲೇ ನಾಪತ್ತೆಯಾಗಿದ್ದಾರೆ. ಆರೋಪಿ ರಿಯಾಜುದ್ದೀನ್​ನನ್ನು ಅರಣ್ಯ ಇಲಾಖೆ ತಮ್ಮ ಕಸ್ಟಡಿಗೆ ತೆಗೆದುಕೊಂಡಿದೆ.

ಗರ್ಭಿಣಿ ಆನೆಯು ಹಸಿವಿನಿಂದ ಸ್ಫೋಟಕ ತುಂಬಿದ ಅನಾನಾಸು​ ತಿನ್ನಲು ಯತ್ನಿಸಿದಾಗ, ಸ್ಫೋಟಕ ಬಾಯಲ್ಲೇ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ಆನೆ ಕೆಲ ದಿನಗಳವರೆಗೆ ನರಳಿ ಮೃತಪಟ್ಟಿತ್ತು. ಬಳಿಕ ಅದರ ಅಂತಿಮ ಸಂಸ್ಕಾರವನ್ನು ಅರಣ್ಯ ಇಲಾಖೆ ನೆರವೇರಿಸಿತ್ತು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago