Featured

ಹಸುವಿನ ತಲೆ ಕಡಿದು ಮಾಂಸ ಕದ್ದ ಪ್ರಕರಣ ​: ಐವರು ಆರೋಪಿಗಳ ಬಂಧನ – vishwanews24

ಗರ್ಭ ಧರಿಸಿದ ಹಸು ತಲೆ ಕಡಿದು ಮಾಂಸ ಕದ್ದ ಪ್ರಕರಣ ​: ಐವರು ಆರೋಪಿಗಳ ಬಂಧನ

ಕಾರವಾರ: ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು ಮೂರು ದಿನಗಳ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಗೋಹಿಂಸೆ ಮತ್ತು ಗೋಹತ್ಯೆಯನ್ನ ಸರ್ಕಾರ ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ. ಗೋ ಹಂತಕರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಗೋ ಮಾಂಸ ಸಾಗಾಟದ ಜಾಲ ಇದರೆ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಗೃಹ ಸಚಿವ ಪರಮೇಶ್ವರ್ ಸಭೆಯಲ್ಲಿ ಸೂಚನೆ ನೀಡಿದ್ದರು. ಇನ್ನು ಕಾರವಾರ ಘಟನೆ ನಂತರ ತನಿಖೆ ಕೈಗೊಂಡಿದ್ದ ಎಸ್​ಪಿ ಎಂ.ನಾರಾಯಣ ನೇತೃತ್ವದ ತಂಡ ಇದುವರೆಗೆ ಐವರು ಗೋಹಂತಕರನ್ನು ಬಂಧಿಸಿದ್ದಾರೆ.

ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದ ಕೃಷ್ಣ ಆಚಾರಿ ಎಂಬುವರು ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಹುಡುಕಾಟ ನಡೆಸಿದ್ದಾಗ ಗೋವನ್ನು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿತ್ತು. ಹಸುವನ್ನು ಕೊಂದಿದ್ದ ದುರುಳರು ಹಸುವಿನ ಹೊಟ್ಟೆಯಲ್ಲಿದ್ದ ಕರುವಿನ ಮಾಂಸವನ್ನು ಹೊತ್ತೊಯ್ದಿದ್ದು ಈ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

9 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

9 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

10 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

13 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

13 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

13 hours ago