ಲಕ್ನೋ: ಗಲಭೆಕೋರರಿಗೆ ದಂಡವೇ ಉತ್ತಮ ಮದ್ದು ಎಂದು ವಕ್ಫ್ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಂಡನೆ ವ್ಯಕ್ತಪಡಿಸಿದ್ದಾರೆ.
ಹರ್ದೋಯ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 2017 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಉತ್ತರ ಪ್ರದೇಶವು ಪ್ರತಿ 2-3 ದಿನಗಳಿಗೊಮ್ಮೆ ಗಲಭೆಗಳನ್ನು ಎದುರಿಸುತ್ತಿತ್ತು. ಗಲಭೆಕೋರರಿಗೆ ದಂಡ ಮಾತ್ರ ಚಿಕಿತ್ಸೆ. ನೀವು ನೋಡಬಹುದು, ಬಂಗಾಳ ಉರಿಯುತ್ತಿದೆ. ಮುಖ್ಯಮಂತ್ರಿ ಮೌನವಾಗಿದ್ದಾರೆ. ಅವರು ಗಲಭೆಕೋರರನ್ನು ‘ಶಾಂತಿ ರಾಯಭಾರಿಗಳು’ ಎಂದು ಕರೆಯುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ನಡೆಗೆ ಯೋಗಿ ಅಸಮಾಧಾನ ಹೊರಹಾಕಿದ್ದಾರೆ.
ಹೊಡೆತದ ಭಾಷೆ ಮಾತ್ರ ಅರಿತುಕೊಳ್ಳುವವರಿಗೆ, ಮಾತಿನ ಪದಗಳು ಅರ್ಥವಾಗುವುದಿಲ್ಲ. ಜಾತ್ಯತೀತತೆಯ ಹೆಸರಿನಲ್ಲಿ ಅವರು ಗಲಭೆಕೋರರಿಗೆ ಸ್ವಾತಂತ್ರ್ಯ ನೀಡಿದ್ದಾರೆ. ಸರ್ಕಾರ ಮೌನವಾಗಿದೆ. ಇಂತಹ ಅರಾಜಕತೆಯನ್ನು ನಿಯಂತ್ರಿಸಬೇಕು ಎಂದು ತಿಳಿಸಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆದ ನಂತರ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅನೇಕ ಕುಟುಂಬಗಳ ಮನೆಗಳು ನಾಶವಾಗಿವೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಅವರು ನಿಯಮಿತವಾಗಿ ಗಸ್ತು ತಿರುಗುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…