Featured

ಗಲಭೆಕೋರರಿಗೆ ದಂಡವೇ ಉತ್ತಮ ಮದ್ದು : ಬಂಗಾಳ ಹಿಂಸಾಚಾರಕ್ಕೆ ಯೋಗಿ ಆದಿತ್ಯನಾಥ್‌ ಖಂಡನೆ – vishwanews24

ವಕ್ಫ್‌ ಕಾಯ್ದೆ ವಿರೋಧಿಸಿ ಪ.ಬಂಗಾಳದಲ್ಲಿ ಹಿಂಸಾಚಾರ

ಲಕ್ನೋ: ಗಲಭೆಕೋರರಿಗೆ ದಂಡವೇ ಉತ್ತಮ ಮದ್ದು ಎಂದು ವಕ್ಫ್‌ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ  ನಡೆದ ಹಿಂಸಾಚಾರಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌  ಖಂಡನೆ ವ್ಯಕ್ತಪಡಿಸಿದ್ದಾರೆ.

ಹರ್ದೋಯ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 2017 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಉತ್ತರ ಪ್ರದೇಶವು ಪ್ರತಿ 2-3 ದಿನಗಳಿಗೊಮ್ಮೆ ಗಲಭೆಗಳನ್ನು ಎದುರಿಸುತ್ತಿತ್ತು. ಗಲಭೆಕೋರರಿಗೆ ದಂಡ ಮಾತ್ರ ಚಿಕಿತ್ಸೆ. ನೀವು ನೋಡಬಹುದು, ಬಂಗಾಳ ಉರಿಯುತ್ತಿದೆ. ಮುಖ್ಯಮಂತ್ರಿ ಮೌನವಾಗಿದ್ದಾರೆ. ಅವರು ಗಲಭೆಕೋರರನ್ನು ‘ಶಾಂತಿ ರಾಯಭಾರಿಗಳು’ ಎಂದು ಕರೆಯುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ನಡೆಗೆ ಯೋಗಿ ಅಸಮಾಧಾನ ಹೊರಹಾಕಿದ್ದಾರೆ.

ಹೊಡೆತದ ಭಾಷೆ ಮಾತ್ರ ಅರಿತುಕೊಳ್ಳುವವರಿಗೆ, ಮಾತಿನ ಪದಗಳು ಅರ್ಥವಾಗುವುದಿಲ್ಲ. ಜಾತ್ಯತೀತತೆಯ ಹೆಸರಿನಲ್ಲಿ ಅವರು ಗಲಭೆಕೋರರಿಗೆ ಸ್ವಾತಂತ್ರ್ಯ ನೀಡಿದ್ದಾರೆ. ಸರ್ಕಾರ ಮೌನವಾಗಿದೆ. ಇಂತಹ ಅರಾಜಕತೆಯನ್ನು ನಿಯಂತ್ರಿಸಬೇಕು ಎಂದು ತಿಳಿಸಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆದ ನಂತರ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅನೇಕ ಕುಟುಂಬಗಳ ಮನೆಗಳು ನಾಶವಾಗಿವೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಅವರು ನಿಯಮಿತವಾಗಿ ಗಸ್ತು ತಿರುಗುತ್ತಿದ್ದಾರೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago