ಗಲಾಟೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ನಟ ದುನಿಯಾ ವಿಜಯ್ ಗೆ ಪೊಲೀಸರಿಂದ ನೋಟಿಸ್ – Vishwanews24

Featured, ರಾಜ್ಯ ನ್ಯೂಸ್

ಗಲಾಟೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ನಟ ದುನಿಯಾ ವಿಜಯ್ ಗೆ ಪೊಲೀಸರಿಂದ ನೋಟಿಸ್

ಬೆಂಗಳೂರು : 2018 ರಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪಾನಿಪುರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್ ಐಆರ್ ದಾಖಲಾಗಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ನಟ ದುನಿಯಾ ವಿಜಯ್ ಗೆ ಹೈಗ್ರೌಂಡ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.

ನಟ ದುನಿಯಾ ವಿಜಯ್ ಹಾಗೂ ಪಾನಿಪೂರಿ ಕಿಟ್ಟಿ ನಡುವಿನ ಗಲಾಟೆಗೆ ಈಗ ಮತ್ತೆ ಮರುಜೀವ ಬಂದಿದೆ. ಪಾನಿಪೂರಿ ಕಿಟ್ಟಿ ವಿರುದ್ಧ ದಾಖಲಾಗಿದ್ದಂತ ಎಫ್‌ಐಆರ್ ರದ್ದು ಪ್ರಶ್ನಿಸಿ ನಟ ವಿಜಿ ಸಲ್ಲಿಸಿದ್ದಂತ ಮೇಲ್ಮನವಿಗೆ ಹೈಕೋರ್ಟ್ ಪುರಸ್ಕರಿಸಿದೆ. ಹೀಗಾಗಿ ಈಗ ಪಾನಿಪೂರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ.

ಮಂಗಳೂರು: ಖ್ಯಾತ ನ್ಯಾಯವಾದಿ ಫಾರೂಕ್ ಹೃದಯಾಘಾತದಿಂದ ನಿಧನ – Vishwanews24

ಇದೀಗ ಪ್ರಕರಣ ಸಂಬಂಧ ಪೊಲೀಸರು ಪಾನಿಪುರಿ ಕಿಟ್ಟಿ ಹೇಳಿಕೆ ಪಡೆದಿದ್ದಾರೆ. ಇದೀಗ ನಟ ದುನಿಯಾ ವಿಜಯ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆದರೆ ದುನಿಯಾ ವಿಜಯ್ ಅವರು ಸದ್ಯ ಹೈದರಾಬಾದ್ ನಲ್ಲಿ ಚಿತ್ರವೊಂದರ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಕಾಲವಾಕಾಶ ಕೇಳಿದ್ದಾರೆ.

ಹಿತಶತ್ರುಗಳ ಬಗ್ಗೆ ಎಚ್ಚರಿಕೆ : ನೋಡಿ ಇಂದಿನ ದಿನ ಭವಿಷ್ಯ – Vishwanews24

Leave a Reply