Featured

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಟು ವಿದ್ಯಾರ್ಥಿಗಳ ಬಂಧನ..

ಮಂಗಳೂರು: ನಗರದ ಮೋರ್ಗನ್‌ ಗೇಟ್‌ ಬಳಿಯ ಮೈದಾನದಲ್ಲಿ ಶನಿವಾರ ಗಾಂಜಾ ಸೇವಿಸುತ್ತಲೇ ಸಾರ್ವಜನಿಕರಿಗೆ ಅದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಟು ವಿದ್ಯಾರ್ಥಿಗಳನ್ನು ನಗರ ಅಪರಾಧ ಘಟಕ (ಸಿಸಿಬಿ) ಹಾಗೂ ಆರ್ಥಿಕ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣ (ಇ ಅಂಡ್‌ ಎನ್‌) ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಏಳು ಮಂದಿ ಕೇರಳದ ವಿದ್ಯಾರ್ಥಿಗಳು.

‘ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕೆರೆ ಕರಿಪ್ರ ನಿವಾಸಿ ಅಕ್ಷಯ್‌ ಕೆ.ಪ್ರಸಾದ್ (22), ಮಂಗಳೂರಿನ ಕಣ್ಣೂರು ಬೋರುಗುಡ್ಡೆ ನಿವಾಸಿ ಜಾಫರ್ (22), ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬ ಸಮೀಪದ ಶ್ರೀಕಂಠಪುರಂ ಗ್ರಾಮದ ಕೋಟ್ಟೂರು ತರಯಿಲ್‌ ನಿವಾಸಿ ನಿಮಿಲ್‌ (21), ಕಣ್ಣೂರು ಜಿಲ್ಲೆಯ ಎಡಕ್ಕಾಡ್ ಗ್ರಾಮದ ಮಾವಿಲಾಯ್‌ ನಿವಾಸಿ ಅಮಿತ್ ಶ್ರೀವತ್ಸನ್‌ (21), ಕಣ್ಣೂರು ಜಿಲ್ಲೆಯ ಕಪ್ಪಾಡ್ ಗ್ರಾಮದ ಚೆಲೂರಾ ನಿವಾಸಿ ಅಶ್ವಿನ್‌ (21), ಕೋಯಿಕ್ಕೋಡ್‌ ಜಿಲ್ಲೆಯ ಪುದಿಯಂಘಾಡಿ ಸಮೀಪದ ಮರಕ್ಕಾರಗಂಪರಂಬ್ ನಿವಾಸಿ ಮೊಹಮ್ಮದ್ ಅಮೀರ್‌, ಪತ್ತನಂತಿಟ್ಟ ಜಿಲ್ಲೆಯ ಅರನ್ಮುಲ ಗ್ರಾಮದ ನಾಲ್ಕಲಿಕ್ಕಲ್‌ ನಿವಾಸಿ ಆಕಾಶ್ ಎಸ್‌.ನಾಯರ್‌ ಮತ್ತು ಕಣ್ಣೂರು ಜಿಲ್ಲೆಯ ಪಯ್ಯಂಬಲ ನಿವಾಸಿ ಅಕ್ಷಯ್‌ ಎಂಬುವವರನ್ನು ಬಂಧಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಟಿ.ಆರ್‌.ಸುರೇಶ್ ತಿಳಿಸಿದ್ದಾರೆ.

ಆರೋಪಿಗಳಿಂದ ₹ 12,000 ಮೌಲ್ಯದ 500 ಗ್ರಾಂ. ಗಾಂಜಾ, 8 ಮೊಬೈಲ್‌ ಫೋನ್‌, ₹ 4,050 ನಗದು ಮತ್ತು ಎರಡು ಬೈಕ್‌ ಸೇರಿದಂತೆ ₹ 1.69 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕೇರಳದಿಂದ ಗಾಂಜಾ ಖರೀದಿಸಿ ತಂದು ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳಲ್ಲಿ ಏಳು ಮಂದಿ ಕೇರಳದವರಾಗಿದ್ದು ನಗರದ ಎರಡು ಎಂಜಿನಿಯರಿಂಗ್‌ ಕಾಲೇಜು ಮತ್ತು ಒಂದು ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ಕಮಿಷನರ್‌ ಮಾಹಿತಿ ನೀಡಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

5 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

5 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

5 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

6 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

7 hours ago