Featured

ಗಾಂಧಿ ಕುಟುಂಬವನ್ನ ಹೊರತುಪಡಿಸಿ ಬೇರೆ ಯಾರಾದರೂ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಲಿ : ಪ್ರಿಯಾಂಕ ಗಾಂಧಿ -Vishwanews24

ಹೊಸದಿಲ್ಲಿ: ಗಾಂಧಿ ಕುಟುಂಬವನ್ನ ಹೊರತುಪಡಿಸಿ ಬೇರೆ ಯಾರಾದರೂ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಲೇ ಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಹೇಳಿದ್ದಾರೆ.

ರಾಹುಲ್ ಗಾಂಧಿ ಎಐಸಿಸಿಗೆ ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎನ್ನುವ ಅಭಿಪ್ರಾಯ ಪಟ್ಟಿದ್ದರು. ಇದಕ್ಕೆ ಪ್ರಿಯಾಂಕಾ ಗಾಂಧಿ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.

ನಮ್ಮ ಕುಟುಂಬ ಯಾರೊಬ್ಬರೂ ಕಾಂಗ್ರೆಸ್​ ಪಕ್ಷಕ್ಕೆ ಅಧ್ಯಕ್ಷರಾಗುವುದಿಲ್ಲ ಎಂದು ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಅದಕ್ಕೆ ನನ್ನ ಸಂಪೂರ್ಣ ಸಹಮತವಿದೆ.

ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ನಾವು ನಮ್ಮ ನಾಯಕ ಎಂದು ಒಪ್ಪಿಕೊಳ್ಳಲು ಸಿದ್ಧರಿದ್ದೇವೆ. ಒಂದು ವೇಳೆ ನಮ್ಮ ಪಕ್ಷದ ಅಧ್ಯಕ್ಷರಾಗುವವರು ‘ನೀನು ಉತ್ತರ ಪ್ರದೇಶದ ಜವಾಬ್ದಾರಿ ತೆಗೆದುಕೊಳ್ಳುವುದು ಬೇಡ, ಅಂಡಮಾನ್ ನಿಕೋಬಾರ್​​ಗೆ ಹೋಗು’ ಎಂದು ಹೇಳಿದರೂ ನಾನು ಅದನ್ನು ಸ್ವೀಕರಿಸಲು ಸಿದ್ಧಳಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷರು ಯಾರೇ ಆದರೂ ಅವರ ಆದೇಶವನ್ನು ನಾನು ಖಂಡಿತ ಪಾಲಿಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.

ಸಹೋದರ ರಾಹುಲ್‌ ಗಾಂಧಿ ಹೇಳುವಂತೆ ಗಾಂಧಿಯೇತರ ವ್ಯಕ್ತಿ ಅಧ್ಯಕ್ಷಗಿರಿಗೆ ಏರಬೇಕು ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ. ನಮ್ಮಲ್ಲಿ ಯಾರು ಕೂಡ ಪಕ್ಷದ ಅಧ್ಯಕ್ಷರಾಗುವುದು ಬೇಡ ಎಂದು ಈ ಹಿಂದೆ ರಾಹುಲ್‌ ಗಾಂಧಿ ಹೇಳಿದ್ದರು ಎನ್ನುವುದನ್ನ ಸ್ಮರಿಸಿದ ಪ್ರಿಯಾಂಕ, ನಾನು ಅವರ(ರಾಹುಲ್‌) ಮಾತಿಗೆ ಸಹಮತ ವ್ಯಕ್ತಪಡಿಸುತ್ತೇನೆ. ಯಾಕೆಂದರೆ ಪಕ್ಷವು ತನ್ನದೆ ಹಾದಿಯನ್ನ ಈಗ ಕಂಡುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ನಾನು ಭಾವಿಸುತ್ತಿರುವುದಾಗಿ ಪ್ರಿಯಾಂಕ ಹೇಳಿದ್ದಾರೆ.

ಇನ್ನು ಯಾರೇ ಪಕ್ಷದ ಅಧ್ಯಕ್ಷರಾದರು ನಾನು ಅವರ ಮಾತನ್ನ ಚಾಚು ತಪ್ಪದೆ ಪಾಲಿಸುತ್ತೇನೆ. ಉತ್ತರ ಪ್ರದೇಶವಲ್ಲ, ಅಂಡಮಾನ್‌ ಮತ್ತು ನಿಕೋಬಾರ್‌ನಲ್ಲಿ ಕೆಲಸ ಮಾಡಲು ಪಕ್ಷ ಸೂಚಿಸಿದರೆ ಅದನ್ನು ಸರಿಯಾಗಿ ನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

16 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

16 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

17 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

17 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

17 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

17 hours ago