Featured

ಗಾಂಧಿ ಕುಟುಂಬ ಯಾವತ್ತೂ ಅಧಿಕಾರಕ್ಕಾಗಿ ಆಸೆಪಟ್ಟಿಲ್ಲ : ಕಾಂಗ್ರೆಸ್‌ ನಾಯಕ ಶಕ್ತಿ ಸಿಂಗ್‌ ಗೋಹಿಲ್ -Vishwanews24

ಪ್ರಧಾನಿ ಹುದ್ದೆ ಹಾಗೂ ಗಾಂಧಿ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿದೆ..
ಗಾಂಧಿ ಕುಟುಂಬ ಯಾವತ್ತೂ ಅಧಿಕಾರಕ್ಕಾಗಿ ಆಸೆಪಟ್ಟಿಲ್ಲ : ಕಾಂಗ್ರೆಸ್‌ ನಾಯಕ ಶಕ್ತಿ ಸಿಂಗ್‌ ಗೋಹಿಲ್

ಹೊಸದಿಲ್ಲಿ: ರಾಷ್ಟ್ರದ ಅಧಿಕಾರದ ಚುಕ್ಕಾಣಿ ಹಾಗೂ ಗಾಂಧಿ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿದೆ. ಆದರೆ, ಗಾಂಧಿ ಕುಟುಂಬ ಯಾವತ್ತೂ ಅಧಿಕಾರಕ್ಕಾಗಿ ಆಸೆಪಟ್ಟಿಲ್ಲ, ಹಲವು ಬಾರಿ ಪ್ರಧಾನಿ ಹುದ್ದೆ ಗಾಂಧಿ ಮನೆತನದ ಮನೆ ಬಾಗಿಲಿಗೆ ಬಂದರೂ ಬೇಡ ಎಂದಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಹಾಗೂ ಬಿಹಾರ್‌ ಕಾಂಗ್ರೆಸ್‌ ಉಸ್ತುವಾರಿ ಶಕ್ತಿ ಸಿಂಗ್‌ ಗೋಹಿಲ್‌‌ ಹೇಳಿದ್ದಾರೆ.

ಬುಧವಾರ ಮಾತನಾಡಿರುವ ಗೋಹಿಲ್‌, 1991ರಲ್ಲಿ ಅಂದಿನ ಪ್ರಧಾನಿ ನರಸಿಂಹ ರಾವ್‌ ಅವರು ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ಹುದ್ದೆ ವಹಿಸಿಕೊಳ್ಳುವಂತೆ ಕೇಳಿದ್ದರು. ಆದರೆ, ಸೋನಿಯಾಜಿ ಅದನ್ನು ನಿರಾಕರಿಸಿದ್ದರು. 2004 ಯುಪಿಎ ಮೊದಲ ಅವಧಿಯಲ್ಲಿ ಸೋನಿಯಾ ಗಾಂಧಿ ಅವರು ಮನಮೋಹನ್‌ ಸಿಂಗ್‌ ಅವರನ್ನು ಪ್ರಧಾನಿಯನ್ನಾಗುವಂತೆ ಕೇಳಿದ್ದರು ಎಂದು ತಿಳಿಸಿದ್ದಾರೆ,

ಇನ್ನು, 2009ರಲ್ಲಿ ಯುಪಿಎ ಎರಡನೇ ಅವಧಿಯಲ್ಲಿ ಮನಮೋಹನ್‌ ಸಿಂಗ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಗ ರಾಹುಲ್‌ ಗಾಂಧಿಗೆ ಪ್ರಧಾನಿಯಾಗಿ ಎಂದು ಹೇಳಿದಾಗಲೂ ರಾಹುಲ್‌ ಗಾಂಧಿ ಅವಕಾಶವನ್ನು ನಿರಾಕರಿಸಿ ಅವರನ್ನೇ ಪ್ರಧಾನಿಯನ್ನಾಗಿ ಮುಂದುವರೆಸಿದರು ಎಂದು ಶಕ್ತಿ ಸಿಂಗ್‌ ಗೋಹಿಲ್‌ ಹೇಳಿದ್ದಾರೆ. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ನಂತರ ಗಾಂಧಿ ಕುಟುಂಬದಿಂದ ಯಾರೂ ಪ್ರಧಾನಿಯಾಗಿಲ್ಲ.

ಬುಧವಾರ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್‌ಗೆ ಗಾಂಧಿಯೇತರ ವ್ಯಕ್ತಿ ಅಧ್ಯಕ್ಷರಾಗಬೇಕು ಎಂದು ಹೇಳಿ ಗಾಂಧಿ ಮನೆತನ ಅಧಿಕಾರಕ್ಕಾಗಿ ಇಲ್ಲ ಎಂಬುದನ್ನು ಸೂಚ್ಯವಾಗಿ ಹೇಳುವ ಪ್ರಯತ್ನ ಮಾಡಿದ್ದರು. ಈ ಮೂಲಕ ಕಾಂಗ್ರೆಸ್‌ನ್ನು ಗಾಂಧಿ ಮನೆತನದ ಪಕ್ಷ ಎಂಬುದನ್ನು ಬದಲಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

9 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

9 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

9 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

9 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

10 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

10 hours ago