ಹೊಸದಿಲ್ಲಿ: ರಾಷ್ಟ್ರದ ಅಧಿಕಾರದ ಚುಕ್ಕಾಣಿ ಹಾಗೂ ಗಾಂಧಿ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿದೆ. ಆದರೆ, ಗಾಂಧಿ ಕುಟುಂಬ ಯಾವತ್ತೂ ಅಧಿಕಾರಕ್ಕಾಗಿ ಆಸೆಪಟ್ಟಿಲ್ಲ, ಹಲವು ಬಾರಿ ಪ್ರಧಾನಿ ಹುದ್ದೆ ಗಾಂಧಿ ಮನೆತನದ ಮನೆ ಬಾಗಿಲಿಗೆ ಬಂದರೂ ಬೇಡ ಎಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಬಿಹಾರ್ ಕಾಂಗ್ರೆಸ್ ಉಸ್ತುವಾರಿ ಶಕ್ತಿ ಸಿಂಗ್ ಗೋಹಿಲ್ ಹೇಳಿದ್ದಾರೆ.
ಬುಧವಾರ ಮಾತನಾಡಿರುವ ಗೋಹಿಲ್, 1991ರಲ್ಲಿ ಅಂದಿನ ಪ್ರಧಾನಿ ನರಸಿಂಹ ರಾವ್ ಅವರು ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ಹುದ್ದೆ ವಹಿಸಿಕೊಳ್ಳುವಂತೆ ಕೇಳಿದ್ದರು. ಆದರೆ, ಸೋನಿಯಾಜಿ ಅದನ್ನು ನಿರಾಕರಿಸಿದ್ದರು. 2004 ಯುಪಿಎ ಮೊದಲ ಅವಧಿಯಲ್ಲಿ ಸೋನಿಯಾ ಗಾಂಧಿ ಅವರು ಮನಮೋಹನ್ ಸಿಂಗ್ ಅವರನ್ನು ಪ್ರಧಾನಿಯನ್ನಾಗುವಂತೆ ಕೇಳಿದ್ದರು ಎಂದು ತಿಳಿಸಿದ್ದಾರೆ,
ಇನ್ನು, 2009ರಲ್ಲಿ ಯುಪಿಎ ಎರಡನೇ ಅವಧಿಯಲ್ಲಿ ಮನಮೋಹನ್ ಸಿಂಗ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಗ ರಾಹುಲ್ ಗಾಂಧಿಗೆ ಪ್ರಧಾನಿಯಾಗಿ ಎಂದು ಹೇಳಿದಾಗಲೂ ರಾಹುಲ್ ಗಾಂಧಿ ಅವಕಾಶವನ್ನು ನಿರಾಕರಿಸಿ ಅವರನ್ನೇ ಪ್ರಧಾನಿಯನ್ನಾಗಿ ಮುಂದುವರೆಸಿದರು ಎಂದು ಶಕ್ತಿ ಸಿಂಗ್ ಗೋಹಿಲ್ ಹೇಳಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ನಂತರ ಗಾಂಧಿ ಕುಟುಂಬದಿಂದ ಯಾರೂ ಪ್ರಧಾನಿಯಾಗಿಲ್ಲ.
ಬುಧವಾರ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ಗೆ ಗಾಂಧಿಯೇತರ ವ್ಯಕ್ತಿ ಅಧ್ಯಕ್ಷರಾಗಬೇಕು ಎಂದು ಹೇಳಿ ಗಾಂಧಿ ಮನೆತನ ಅಧಿಕಾರಕ್ಕಾಗಿ ಇಲ್ಲ ಎಂಬುದನ್ನು ಸೂಚ್ಯವಾಗಿ ಹೇಳುವ ಪ್ರಯತ್ನ ಮಾಡಿದ್ದರು. ಈ ಮೂಲಕ ಕಾಂಗ್ರೆಸ್ನ್ನು ಗಾಂಧಿ ಮನೆತನದ ಪಕ್ಷ ಎಂಬುದನ್ನು ಬದಲಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…