ರಾಯ್‌ಪುರ್: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕುರಿತಾಗಿ ನಿಂದನಾತ್ಮಕ ಹೇಳಿಕೆ ನೀಡಿದ್ದ ಕಾಳಿಚರಣ್ ಮಹಾರಾಜ್ ಅವರನ್ನು ರಾಯ್‌ಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ.ಖಜುರಾಹೋದಲ್ಲಿದ್ದ ಕಾಳಿ ಚರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಛತ್ತೀಸ್‌ಗಢದ ರಾಯ್‌ಪುರ್ ದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕಾಳಿಚರಣ್, ಗಾಂಧೀಜಿ ಅವರನ್ನು ನಿಂದಿಸಿದ್ದಲ್ಲದೆ, ಅವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದರು.
ರಾಯ್ ಪುರ್ ಮಾಜಿ ಮೇಯರ್ ಪ್ರಮೋದ್ ದುಬೆ ನೀಡಿದ್ದ ದೂರು ಆಧರಿಸಿ ತಿಕ್ರಪಾರಾ ಠಾಣೆ ಪೊಲೀಸರು ಕಾಳಿ ಚರಣ್ ವಿರುದ್ಧ ಐಪಿಸಿ ಸೆಕ್ಷನ್ 505 (2) 294 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
ರಾಯ್ ಪುರ್ ಪೊಲೀಸರು ಪ್ರಕರಣ ದಾಖಲಿಸಿದ ಕೂಡಲೇ ಕಾಳಿಚರಣ್ ಮಹಾರಾಜ್ ಚತ್ತೀಸಘಡದಿಂದ ನಾಪತ್ತೆಯಾಗಿದ್ದರು ಎಂದು ವರದಿಯಾಗಿದೆ.ಆರೋಪಿ ಕಾಳಿಚರಣ್‌ನನ್ನು ಬಂಧಿಸಲು ಪೊಲೀಸರು ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ರಾಜ್ಯಗಳಿಗೆ ವಿಶೇಷ ತಂಡಗಳನ್ನು ಕಳುಹಿಸಲಾಗಿತ್ತು ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…