ನವದೆಹಲಿ: ದೇಶಾದ್ಯಂತ ಇಂದು ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನವನ್ನು ಶ್ರದ್ಧಾ ಭಕ್ತಿ ಗಳೊಂದಿಗೆ ಆಚರಿಸಲಾಗುತ್ತಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗಾಂಧೀಜಿಯವರನ್ನು ಸ್ಮರಿಸಿ, ಗಾಂಧೀಜಿಯವರ 150ನೇ ಜಯಂತಿಯ ಈ ಸಮಯ ನಮಗೆ ಸತ್ಯ. ಅಹಿಂಸೆ, ಸಹಕಾರ, ನೈತಿಕತೆ ಮತ್ತು ಸರಳತೆಯ ಮೌಲ್ಯಗಳನ್ನು ನೆನಪಿಸಿ ಜೀವನದಲ್ಲಿ ಅಳವಡಿಸಿಕೊಳ್ಳಲು ಸುಸಂದರ್ಭವಾಗಿದೆ. ಅವರ ಸಂದೇಶಗಳು ನಮಗೆ ಪ್ರಸ್ತುತವಾಗಿದ್ದು ಅವರ ಮಾರ್ಗದರ್ಶನಗಳು ಎಂದೆಂದಿಗೂ ದಾರಿದೀಪ ಎಂದಿದ್ದಾರೆ,
ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ. ಪ್ರೀತಿಯ ಬಾಪುಗೆ ನಮನಗಳು. ಮಾನವೀಯತೆಗೆ ಗಾಂಧೀಜಿಯವರು ನೀಡಿದ ಅಮೂಲ್ಯ ಕೊಡುಗೆಗಳಿಗೆ ನಮ್ಮ ಕೃತಜ್ಞತೆಗಳು. ಅವರ ಕನಸನ್ನು ಸಾಕಾರಗೊಳಿಸಲು ಮತ್ತು ಉತ್ತಮ ಸಮಾಜ ನಿರ್ಮಾಣಕ್ಕೆ ನಾವು ಪಣತೊಟ್ಟು ಅದರ ಕಡೆಗೆ ಕೆಲಸ ಮಾಡೋಣ ಎಂದಿದ್ದಾರೆ.
ನಂತರ ಇಂದು ಬೆಳಗ್ಗೆ ದೆಹಲಿಯ ರಾಜಘಾಟ್ ನಲ್ಲಿರುವ ಮಹಾತ್ಮಾ ಗಾಂಧಿ ಸಮಾದಿಗೆ ತೆರಳಿದ ಮೋದಿ ಬಾಪೂಜಿಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಭಾರತೀಯ ಜನತಾ ಪಾರ್ಟಿಯ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಉಪಸ್ಥಿತರಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸಹ ಗಾಂಧೀಜಿ ಸಮಾಧಿಗೆ ಪುಷ್ಪ ಗೌರವ ಸಲ್ಲಿಸಿದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…