ಚಿಕ್ಕಮಗಳೂರು: “ಸಿ.ಟಿ ರವಿ ಯಾವತ್ತು ಸತ್ಯ ಹೇಳಿ ಗೊತ್ತಿಲ್ಲ. ಸುಳ್ಳು ಮೈಗೂಡಿಸಿಕೊಂಡಿದ್ದಾರೆ. ಸಿ.ಟಿ ರವಿ ಅವರ ಅಭಿವೃದ್ಧಿಯಾಗಿದೆ ಹೊರತು ಜನರ ಅಭಿವೃದ್ಧಿಯಾಗಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಖಾಸಗಿ ಹೋಟೇಲ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ನಾವು ನಮ್ಮ ಅಭಿಪ್ರಾಯವನ್ನು ರಾಜ್ಯಪಾಲರ ಭಾಷಣದ ಪ್ರತಿ ನೋಡಿದ ಮೇಲೆ ತಿಳಿಸಲೇ ಬೇಕಾಗುತ್ತದೆ. ಶಾಸಕರ ಹಕ್ಕನ್ನು ನಾವು ರಾಜ್ಯದ ಜನತೆಯ ಧ್ವನಿಯಾಗಿ ಕೆಲಸ ಮಾಡಬೇಕಾಗುತ್ತದೆ. ರಾಜ್ಯಪಾಲರ ಭಾಷಣದಲ್ಲಿ ಆಕ್ಷೇಪಾರ್ಹ ವಿಷಯಗಳಿದ್ದರೆ ನಂತರದ ಮಾತು. ಪ್ರತಿಭಟಿಸುವ ಶಾಸಕರನ್ನು ಅಮಾನತಿನಲ್ಲಿ ಇಡುತ್ತೇವೆ ಎನ್ನುವುದು ಅಸಂವಿಧಾನಿಕ. ವಿನಾ ಕಾರಣ ಭಾಷಣಕ್ಕೆ ಅಡ್ಡಿಪಡಿಸುವುದಿಲ್ಲ ಆಕ್ಷೇಪಾರ್ಹವಿದ್ದರೆ ಪ್ರತಿಭಟಿಸಬೇಕಾಗುತ್ತದೆ” ಎಂದರು.
ಅಭಿವೃದ್ದಿ ವಿಚಾರವಾಗಿ ಸಿಟಿ ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, “ಯಾವತ್ತು ಸಿ ಟಿ ರವಿ ಅವರಿಗೆ ಸತ್ಯ ಹೇಳಿ ಗೊತ್ತಿಲ್ಲ. ಸುಳ್ಳನ್ನು ಮೈಗೂಡಿಸಿಕೊಂಡಿದ್ದಾರೆ. ಸಿ.ಟಿ ರವಿ ಅವರ ಅಭಿವೃದ್ಧಿಯಾಗಿದೆ ಹೊರತು ಜನರ ಅಭಿವೃದ್ಧಿಯಾಗಿಲ್ಲ” ಎಂದು ತಿಳಿಸಿದರು.
“ಕಳೆದ ಬಾರಿ ಬಜೆಟ್ ನಲ್ಲಿ 27 ಲಕ್ಷ ಕೋಟಿ ಖರ್ಚು ಮಾಡುತ್ತೇನೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ಏನು ಮಾಡಿದೆ ಎಂದು ತಿಳಿಯುತ್ತದೆ. ಸ್ವರ್ಗ ಸೃಷ್ಟಿ ಮಾಡುತ್ತೇನೆ ಅಂದಿದ್ದರು. ಅದರೆ ಈಗ ನರಕವಾಗಿದೆ. ಅವರ ಪ್ರಕಾರ ಜಿಡಿಪಿ 4.5%, ನನ್ನ ಪ್ರಕಾರ 2.5%. ಜಿಡಿಪಿ ಇಳಿದಿದೆ. 10 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದಿದ್ದರು ಆದರೆ, ಈಗ ಲಕ್ಷಾಂತರ ಉದ್ಯೋಗ ಕಡಿತಗೊಂಡಿದೆ. ದೇಶದ ಅರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಈ ವಿಚಾರವನ್ನು ಮುಚ್ಚಿ ಹಾಕುವ ಸಲುವಾಗಿ ಸಿಎಎ, ಎನ್‌ಆರ್‌ಸಿ ಮೂಲಕ ಬೇರೆಡೆಗೆ ಸೆಳೆಯಲು ನಾಟಕವಾಡುತ್ತಿದ್ದಾರೆ” ಎಂದು ಹೇಳಿದರು.
ದೆಹಲಿಯಲ್ಲಿ ಜ.30 ಗುರುವಾರ ಗುಂಡು ಹಾರಿಸಿದ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು, “ಗಾಂಧೀಜಿ ಹಿಂದೂ ವಿರೋಧಿಯಾಗಿರಲ್ಲ. ಆರ್‌ಎಸ್‌ಎಸ್ ಹಾಗೂ ಹಿಂದೂ ಮಹಾಸಭಾದವರು ಮಹಾತ್ಮ ಗಾಂಧಿಯನ್ನು ಕೊಂದಿದ್ದು. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಕುಮ್ಮಕ್ಕಿನಿಂದ ಗುಂಡು ಹಾರಿಸಿರುವುದು . ಪೊಲೀಸರು ಮೂಖಪ್ರೇಕ್ಷಕರಂತಿದ್ದರೂ ಎಂದರೆ ಏನಾಗಿದೆ ದೇಶದ ಪರಿಸ್ಥಿತಿ ಎಂಬುದು ತಿಳಿಯುತ್ತಿದೆ” ಎಂದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…