ಗಾಡಿಯಲ್ಲಿ ಮಾರಾಟ ಮಾಡುತ್ತಿದ್ದ ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಅನುಮಾನಾಸ್ಪದ ಸಾವು – Vishwanews24

Featured, ರಾಷ್ಟ್ರ ನ್ಯೂಸ್

ಗಾಡಿಯಲ್ಲಿ ಮಾರಾಟ ಮಾಡುತ್ತಿದ್ದ ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಅನುಮಾನಾಸ್ಪದ ಸಾವು

ಶ್ರೀರಂಗಪಟ್ಟಣ: ಗಾಡಿಯಲ್ಲಿ ಮಾರಾಟ ಮಾಡುತ್ತಿದ್ದ ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿದ ಕಂದಮ್ಮಗಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತರಾದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅವರೊಂದಿಗೆ ಐಸ್ ಕ್ರೀಂ ತಿಂದಿದ್ದ ಪೂಜಾ ಕೂಡ ಅಸ್ವಸ್ಥಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ, ವ್ಯಕ್ತಿಯ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ : ದರ್ಶನ್ – Vishwanews24

ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್‌ಕ್ರೀಂ ‌ತಿಂದಿದ್ದರು. ಐಸ್‌ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply