ಶ್ರೀರಂಗಪಟ್ಟಣ: ಗಾಡಿಯಲ್ಲಿ ಮಾರಾಟ ಮಾಡುತ್ತಿದ್ದ ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿದ ಕಂದಮ್ಮಗಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತರಾದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅವರೊಂದಿಗೆ ಐಸ್ ಕ್ರೀಂ ತಿಂದಿದ್ದ ಪೂಜಾ ಕೂಡ ಅಸ್ವಸ್ಥಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್‌ಕ್ರೀಂ ತಿಂದಿದ್ದರು. ಐಸ್‌ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…