Featured

ಗಾಯಕ ಎಸ್​.ಪಿ ಬಾಲಸುಬ್ರಮಣ್ಯಂ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ -Vishwanews24

ಚೆನ್ನೈ : ಕಳೆದ ವಾರವಷ್ಟೇ ಕರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ (74) ಆರೋಗ್ಯ ಸ್ಥಿತಿ ಗಂಭೀರವಾಗಿದೆಯೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಚೆನ್ನೈನ ಎಂಜಿ ಹೆಲ್ತ್​ಕೇರ್​ನಲ್ಲಿ ಆಗಸ್ಟ್ 5ರಂದು ಕರೊನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಎಸ್​ಪಿಬಿ ಅವರನ್ನು ದಾಖಲಿಸಲಾಗಿತ್ತು. ಅಂದಿನಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆಸ್ಪತ್ರೆ, ಎಸ್​ಪಿಬಿ ಅವರ ಆರೋಗ್ಯದ ಸ್ಥಿತಿ ಬಗ್ಗೆ ತಿಳಿಸಿದೆ.

ಆಗಸ್ಟ್ 13ರಿಂದ ಎಸ್​ಪಿಬಿ ಅವರ ಸ್ಥಿತಿ ತೀರಾ ಹದಗೆಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಈಗಾಗಲೇ ನುರಿತ ವೈದ್ಯರನ್ನೂ ಕರೆಸಲಾಗಿದೆ. ಸದ್ಯ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ವೆಂಟಿಲೇಟರ್​ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ.

ಆಗಸ್ಟ್ 5ರಂದು ಕರೊನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್​ಪಿಬಿ, ಶೀಘ್ರದಲ್ಲಿ ಗುಣಮುಖನಾಗಿ ಆಚೆ ಬರುವೆ ಎಂದು ಹೇಳಿಕೊಂಡಿದ್ದರು. (ಏಜೆನ್ಸೀಸ್​)

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago