ಗೀತಾಂಜಲಿ ಸುವರ್ಣ ವತಿಯಿಂದ ಕಟಪಾಡಿ ಜೆ.ಎನ್ ನಗರಕ್ಕೆ ಟ್ಯಾಂಕರ್ ನೀರು ಸರಬರಾಜಿಗೆ ಸಂಸದೆ ಶೋಭಾ ಚಾಲನೆ.
ಕಟಪಾಡಿ: ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ವತಿಯಿಂದ ಕಟಪಾಡಿ ಜೆ.ಎನ್ ನಗರ ಕಾಲೋನಿಯ ಜನತೆಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜಿಗೆ ಸಂಸದೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು ಮತ್ತು ಬಡ ಕುಟುಂಬಗಳಿಗೆ ಪಡಿತರ ಕಿಟ್ ವಿತರಿಸಿದರು.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂಸದೆ” ಬೇಸಿಗೆ ಕಾಲದಲ್ಲಿ ನೀರಿನ ಬರ ನೀಗಿಸಲು ಗೀತಾಂಜಲಿ ಸುವರ್ಣ ವೈಯಕ್ತಿಕ ವತಿಯಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ ಇದನ್ನ ಜನತೆ ಸದುಪಯೋಗ ಪಡಿಸಿಕೊಳ್ಳಬೇಕೆಂದರು”
ಗೀತಾಂಜಲಿ ಸುವರ್ಣ ಮಾತಾಡಿ ” ನನ್ನ ಕ್ಷೇತ್ರದ ಜನತೆಯ ಕಷ್ಟದಲ್ಲಿ ಭಾಗಿಯಾಗುವುದು ಧರ್ಮ ಮತ್ತು ಕರ್ತವ್ಯ ಈ ಹಿಂದಿನ ದಿನಗಳಲ್ಲಿ ಒಂದು ಸುತ್ತಿನ ಕಿಟ್ ವಿತರಣೆ ಮಾಡಿದ್ದು ಪ್ರಸ್ತುತ ನೀರಿನ ಸಮಸ್ಯೆ ಎಂದಾಗ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.
ಈ ಸಂಧರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್,ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗುರ್ಮೆ ಸುರೇಶ್ ಶೆಟ್ಟಿ,ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್,ವೀಣಾ ಶೆಟ್ಟಿ, ಪವಿತ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್
ವಿಶ್ವನ್ಯೂಸ್24: 9343846360
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…