ಜೈಪುರ: ಬಾತ್ ರೂಮ್ ನಲ್ಲಿ ಸ್ನಾನ ಮಾಡುವಾಗ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.
ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳು.
ಮಗ ವಿಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು ತಮ್ಮ 5 ವರ್ಷದ ಮಗನನ್ನು ಕರೆದುಕೊಂಡು ದಂಪತಿಗಳು ಬಾತ್ ರೂಮ್ ಗೆ ತೆರಳಿದ್ದಾರೆ. ಈ ವೇಳೆ ಗೀಸರ್ ಆನ್ ಮಾಡಿದ್ದಾರೆ. ಕೆಲವೇ ಕ್ಷಣದಲ್ಲಿ ಗೀಸರ್ ಅನಿಲ ಸೋರಿಕೆಯಾಗಿದೆ. ಏಕಾಏಕಿ ಗೀಸರ್ ಗ್ಯಾಸ್ ಲೀಕ್ ಆದ ಪರಿಣಾಮ ದಂಪತಿಗಳಿಗೆ ಉಸಿರುಗಟ್ಟಿ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದಾದ ಕೆಲ ಸಮಯದ ಬಳಿಕ ಕುಟುಂಬದ ಇತರ ಸದಸ್ಯರು ಬಾಗಿಲು ಬಡಿದು ಕರೆಯಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಬಾಗಿಲು ಒಡೆದು ನೋಡಿದ್ದಾರೆ. ನೋಡುವಾಗ ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇದರಲ್ಲಿ ದಂಪತಿಗಳು ಮೃತಪಟ್ಟಿದ್ದು,ಮಗ ವಿಹಾನ್ ಬದುಕುಳಿದಿದ್ದಾರೆ ಎಂದು ಘಟನೆ ಬಗ್ಗೆ ಪೊಲೀಸರು ಹೇಳಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…