Featured

ಗುಂಡಿನ ದಾಳಿ : ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ನಿಧನ – Vishwanews24

ಗುಂಡಿನ ದಾಳಿ : ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ನಿಧನ – Vishwanews24

ಟೋಕಿಯೊ: ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೃತಪಟ್ಟಿದ್ದಾರೆ.

ಪೂರ್ವ ಜಪಾನ್ ನ ನಾರಾ ನಗರದಲ್ಲಿ ಇಂದು ಬೆಳಗ್ಗೆ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಎದೆ, ಕುತ್ತಿಗೆ ಸೇರಿದಂತೆ ದೇಹದ ವಿವಿಧೆಡೆ ಗುಂಡು ತಗುಲಿದ್ದರಿಂದ ತೀವ್ರ ರಕ್ತಸ್ರಾವವಾಗಿದ್ದಲ್ಲದೆ, ಹೃದಯ ಸ್ತಂಭನಕ್ಕೂ ಒಳಗಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಶಿಂಜೊ ಅಬೆ ಮೃತಪಟ್ಟಿರುವ ವಿಚಾರವನ್ನು ಜಪಾನ್ ನ ಸುದ್ದಿಸಂಸ್ಥೆಯೊಂದು ಇಂದು ಮಧ್ಯಾಹ್ನ ಅಧಿಕೃತವಾಗಿ ಘೋಷಿಸಿದೆ.

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆಯವರ ನಿಧನಕ್ಕೆ ವಿಶ್ವದ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ. ಶುದ್ದಹಸ್ತ ರಾಜಕಾರಣಿಯೊಬ್ಬರನ್ನು ಜಪಾನ್ ಮಾತ್ರವಲ್ಲದೆ, ಇಡೀ ವಿಶ್ವವೇ ಕಳೆದುಕೊಂಡಿದೆ ಎಂಬುದಾಗಿ ವಿಶ್ವನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago