ಗಾಂಧೀನಗರ: ಟೀಂ ಇಂಡಿಯಾದ ಸ್ಟಾರ್ ಆಲ್‍ರೌಂಡರ್ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಅವರಿಗೆ ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಯಿಂದ ಟಿಕೆಟ್ ಸಿಕ್ಕಿದೆ. ಗುಜರಾತ್‍ನ ಜಮ್ನಗರ ಉತ್ತರದಿಂದ ರಿವಾಬಾ ಜಡೇಜಾ ಸ್ಪರ್ಧಿಸಲಿದ್ದಾರೆ.
ನಿನ್ನೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿತ್ತು. ಸಭೆಯಲ್ಲಿ ಪಕ್ಷದ ಮುಖ್ಯಸ್ಥ ಜೆ.ಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಪಾಲ್ಗೊಳ್ಳಂಡಿದ್ದರು. ಸಭೆಯಲ್ಲಿ ಒಟ್ಟು 100ಕ್ಕೂ ಅಧಿಕ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಗುಜರಾತ್‍ನ ಜಮ್ನಗರ ಉತ್ತರದಿಂದ ರಿವಾಬಾ ಜಡೇಜಾ ಬಿಜೆಪಿ ಟಿಕೆಟ್ ನೀಡಿದೆ. ಇದನ್ನೂ ಓದಿ: ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧ : ಪ್ರಮೋದ್ ಮುತಾಲಿಕ್ ಸೇರಿ ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ – Vishwanews24
2016ರಲ್ಲಿ ಜಡೇಜಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಿವಾಬಾ ಜಡೇಜಾ ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರೆ. ಅಲ್ಲದೇ ಕಾಂಗ್ರೆಸ್ ಹಿರಿಯ ಆಯಕ ಹರಿಸಿಂಗ್ ಸೋಲಂಕಿ ಅವರ ಸಂಬಂಧಿಯಾಗಿದ್ದಾರೆ. ರಿವಾಬಾ ಜಡೇಜಾರನ್ನು ಬಿಜೆಪಿ ನಾಯಕರಾದ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದರು. ಇದೀಗ ಬಿಜೆಪಿ ಟಿಕೆಟ್ ನೀಡಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದೆ.
ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಪಕ್ಷದ ಹಿರಿಯ ನಾಯಕ ಭೂಪೇಂದ್ರ ಸಿನ್ಹ್ ಚುಡಾಸಮಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಅವರನ್ನು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟಿದೆ. ಗುಜರಾತ್‍ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.ಇದನ್ನೂ ಓದಿ: ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ನಾಪತ್ತೆ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…