Featured

ಗುಡ್ಡ ಕುಸಿತ : ಜು.22ರ ವರೆಗೆ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ನಿರ್ಬಂಧ – vishwanews24

ಗುಡ್ಡ ಕುಸಿತ : ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ಪ್ರವೇಶ , ವಾಹನ ಸಂಚಾರ ನಿಷೇಧ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶವನ್ನು ಜು.22ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ಶೃಂಗೇರಿ, ನರಸಿಂಹರಾಜಪುರ, ಮೂಡಿಗೆರೆ, ಕಳಸ, ಕುದುರೆಮುಖ ಭಾಗದಲ್ಲಿ ತೀವ್ರ ಮಳೆಯಾಗುತ್ತಿದ್ದು ಹಳ್ಳಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಈ ಹಿನ್ನಲೆ ಜಿಲ್ಲೆಯಲ್ಲಿನ ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಈ ಹಿಂದೆ ಜಿಲ್ಲಾಡಳಿತ ಮನವಿ ಮಾಡಿತ್ತು.

ಮುಳ್ಳಯ್ಯನಗಿರಿ ಪ್ರದೇಶಕ್ಕೆ ತೆರಳುವ ಮಾರ್ಗದ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದೆ. ಇಲ್ಲಿಗೆ ತೆರಳುವ ಮಾರ್ಗ ಕಿರಿದಾಗಿರುವ ಕಾರಣ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲಾಡಳಿತ ಅಗತ್ಯ ವಾಹನಗಳನ್ನು ಹೊರತುಪಡಿಸಿ (ಸ್ಥಳೀಯ ವಾಹನ) ಹೊರಗಿನಿಂದ ಬರುವ ವಾಹನಗಳಿಗೆ ಜು.22ರ ವರೆಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸ ಕೈಗೊಳ್ಳುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವುದು ಒಳಿತು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago