Featured

ಗುಡ್ಡ ಪಾಣಾರರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಮೂಲಕ ತುಳುನಾಡಿನ ದೈವಾರಾಧನೆಗೆ ಸಂದ ಗೌರವ : ಯಶ್ ಪಾಲ್ ಸುವರ್ಣ – Vishwanews24

ಗುಡ್ಡ ಪಾಣಾರರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಮೂಲಕ ತುಳುನಾಡಿನ ದೈವಾರಾಧನೆಗೆ ಸಂದ ಗೌರವ : ಯಶ್ ಪಾಲ್ ಸುವರ್ಣ

67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಾಡಿನ ವಿವಿಧ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ಈ ಸಾಲಿನಲ್ಲಿ ಉಡುಪಿ ಜಿಲ್ಲೆಯ ಹಿರಿಯ ದೈವ ನರ್ತಕರಾದ ಶ್ರೀ ಗುಡ್ಡ ಪಾಣಾರ ರವರಿಗೆ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ ರಾಜ್ಯ ಸರಕಾರ ತುಳುನಾಡಿನ ದೈವಾರಾಧನೆಗೆ ಗೌರವ ಸಲ್ಲಿಸಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.
ಕಳೆದ 38 ವರ್ಷಗಳಿಂದ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಾ, ತುಳುನಾಡಿನ ಅತೀ ವಿಶಿಷ್ಟ ವಾದ ಕಾಪುವಿನಲ್ಲಿ ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಪಿಲಿ ಕೋಲದಲ್ಲಿ ದೈವ ನರ್ತನದ ಮೂಲಕ  ಕರಾವಳಿಯಾದ್ಯಂತ ಗುರುತಿಸಿಕೊಂಡಿರುವ ಗುಡ್ಡ ಪಾಣಾರ ರವರನ್ನು ಪ್ರಶಸ್ತಿ ಮನೆ ಬಾಗಿಲಿಗೆ ಅರಸಿ ಬಂದಿದೆ.
ಎಲೆ ಮರೆಯ ಕಾಯಿಯಂತೆ ಧರ್ಮ ನಿಷ್ಠೆಯಿಂದ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿರುವ ಗುಡ್ಡ ಪಾಣಾರರಿಗೆ ಪ್ರಶಸ್ತಿ ನೀಡುವ ಮೂಲಕ ರಾಜ್ಯೋತ್ಸವ ಪ್ರಶಸ್ತಿಗೂ ಮೌಲ್ಯ ಹೆಚ್ಚಾಗಿದೆ.
ರಾಜ್ಯ ಬಿಜೆಪಿ ಸರ್ಕಾರ ಈಗಾಲೇ 60 ವರ್ಷ ಮೇಲ್ಪಟ್ಟ ದೈವಾರಾಧಕರಿಗೆ ಮಾಸಾಶನ ನೀಡುವ ಯೋಜನೆಗೆ ಚಾಲನೆ ನೀಡಿದ್ದು,  ನಮ್ಮ ನಾಡಿನ ಸನಾತನ ಸಂಸ್ಕೃತಿಯ ಕೊಂಡಿಯಾಗಿರುವ ದೈವಾರಾಧನೆಗೆ ಪ್ರೋತ್ಸಾಹ ನೀಡುವ ಸರಕಾರದ ನಡೆ ಶ್ಲಾಘನೀಯವಾಗಿದೆ.
ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಪದ್ಮ ಪ್ರಶಸ್ತಿಗಳನ್ನು  ಅರ್ಹತೆಯ ಮೇರೆಗೆ ಸಮಾಜದಲ್ಲಿ ಅಪ್ರತಿಮ ಸಾಧನೆಗೈದ ಸಾಮಾನ್ಯ ವ್ಯಕ್ತಿಗಳನ್ನು ಅರಸಿ ಬಂದಂತೆ, ಇದೀಗ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ವಿಶೇಷ ಮುತುವರ್ಜಿಯಿಂದ ಅರ್ಹ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಪಡುಬಿದ್ರಿ: ತಾಯಿ – ಮಗ ನಾಪತ್ತೆ ; ದೂರು ದಾಖಲು – Vishwanews24
Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 days ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago