ಬಹುತೇಕ ಪ್ರತಿಯೊಬ್ಬರ ಮನೆಯಲ್ಲೂ ಈಗ ಎಲ್ ಪಿ ಜಿ ಸಿಲಿಂಡರ್ ಇದೆ. ಸಿಲಿಂಡರ್ ಇಲ್ಲದೆ ಅಡುಗೆ ಮಾಡೋದೇ ಕಷ್ಟ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಎಲ್ ಪಿ ಜಿ ಸಿಲಿಂಡರ್ ಬೆಲೆ ಗಗನಕ್ಕೇರಿದೆ. ಸಿಲಿಂಡರ್ ಬೆಲೆ 1000 ಗಡಿ ದಾಟಿದ್ದು, ಬಡ, ಮಧ್ಯಮ ವರ್ಗದ ಜನರು ಕಣ್ಣೀರಿಡುವಂತಾಗಿದೆ.
ಜನ ಸಾಮಾನ್ಯರ ಸಮಸ್ಯೆಯನ್ನು ಅರಿತಿರುವ ಕೇಂದ್ರ ಸರ್ಕಾರ ಸಿಲಿಂಡರ್ ಭಾರವನ್ನು ಇಳಿಸಲು ಯೋಜನೆ ರೂಪಿಸುತ್ತಿದೆ. ಮಾಧ್ಯಮಗಳ ವರದಿ ಪ್ರಕಾರ, ಕೇಂದ್ರ ಸರ್ಕಾರ ಡಿಬಿಟಿ (ನೇರ ಲಾಭದ ವರ್ಗಾವಣೆ) ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದೆ. ಕೇಂದ್ರ ಸರ್ಕಾರ ಎಲ್ ಪಿ ಜಿ ಸಿಲಿಂಡರ್ ಮೇಲೆ ಸಬ್ಸಿಡಿ ನೀಡುತ್ತಿದೆ. ಆದ್ರೆ ಗ್ರಾಹಕರು ಮೊದಲು ಸಿಲಿಂಡರ್ ನ ಪೂರ್ಣ ಹಣವನ್ನು ಪಾವತಿ ಮಾಡಬೇಕು. ನಂತ್ರ ಬ್ಯಾಂಕ್ ಫಲಾನುಭವಿ ಖಾತೆಗೆ ಹಣ ವರ್ಗಾವಣೆ ಮಾಡುತ್ತದೆ. ಇದು ಜನ ಸಾಮಾನ್ಯರಿಗೆ ಸಮಸ್ಯೆಯಾಗಿದೆ.
ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಯೋಜನೆಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ. ಹೊಸ ನಿಯಮದ ಪ್ರಕಾರ ಗ್ರಾಹಕರ ಸಬ್ಸಿಡಿ ಹಣ ನೇರವಾಗಿ ಪೆಟ್ರೋಲಿಯಂ ಕಂಪನಿಗಳ ಖಾತೆ ಸೇರಲಿದೆ. ಇದಕ್ಕಾಗಿ ಸರ್ಕಾರ ಹೊಸ ಸಿಸ್ಟಂ ಜಾರಿಗೆ ಬರ್ತಿದೆ. ಅದ್ರ ಪ್ರಕಾರ ನೀವು ಗ್ಯಾಸ್ ಬುಕ್ ಮಾಡ್ತಿದ್ದಂತೆ ನಿಮ್ಮ ಮೊಬೈಲ್ ಗೆ ಕೋಡ್ ಬರಲಿದೆ. ಮನೆಗೆ ಸಿಲಿಂಡರ್ ನೀಡಲು ಬಂದ ವ್ಯಕ್ತಿಗೆ ಈ ಕೋಡ್ ನೀಡಬೇಕು. ಆತ ಸಿಸ್ಟಂನಲ್ಲಿ ಈ ಕೋಡನ್ನು ನಮೂದಿಸುತ್ತಾನೆ. ಆಗ ನಿಮ್ಮ ಸಬ್ಸಿಡಿ ಹಣ ನೇರವಾಗಿ ಪೆಟ್ರೋಲಿಯಂ ಕಂಪನಿಗಳ ಬ್ಯಾಂಕ್ ಖಾತೆಗೆ ಹೋಗಲಿದೆ. ಗ್ರಾಹಕರು ಕೇವಲ ಸಬ್ಸಿಡಿ ಬೆಲೆಯನ್ನು ಮಾತ್ರ ಪಾವತಿಸಿದ್ರೆ ಸಾಕು. ಸದ್ಯ 1000 ರೂಪಾಯಿಯಾಗಿರುವ ಸಿಲಿಂಡರ್ ಬೆಲೆ ಹೊಸ ನಿಯಮ ಜಾರಿಗೆ ಬಂದ್ರೆ 507 ರೂಪಾಯಿಯಾಗಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…