ಕ್ರೈಸ್ತ ಸಮುದಾಯಕ್ಕೆ ಎ.16, 17 ಮತ್ತು 18 ಈ ಮೂರು ದಿನಗಳು ಪವಿತ್ರ ದಿನಗಳಾಗಿವೆ. 18ರಂದು ಗುಡ್‌ಫ್ರೈಡೆ ಸರಕಾರಿ ರಜಾ ದಿನವಾಗಿದ್ದರೂ ಅಂದು ಸಿಇಟಿ ಪರೀಕ್ಷೆ ಯನ್ನು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ನಡೆಸಲು ನಿರ್ಧರಿಸಿದೆ.
ಆನೇಕ ಕ್ರೈಸ್ತ ಶಿಕ್ಷಣ ಸಂಸ್ಥೆಗಳನ್ನು ಸಿಇಟಿಗೆ ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಕ್ರೈಸ್ತ ಸಮುದಾಯಕ್ಕೆ ಸೇರಿರುವ ಸಹಸ್ರಾರು ಮಂದಿ ಈಗಾಗಲೇ ಸಿಇಟಿ ಬರೆಯಲು ಅರ್ಜಿ ಸಲ್ಲಿಸಿದ್ದಾರೆ.
ಹೋಲಿ ವೀಕ್ ನಲ್ಲಿ ಸೋಮವಾರದಿಂದ ಆದಿತ್ಯವರಾದ ವರೆಗೆ ಕ್ರೈಸ್ತರು ಉಪವಾಸ ಮತ್ತು ಚರ್ಚ್‌ಗಳಲ್ಲಿ ಪ್ರಾರ್ಥನೆಗಳಲ್ಲಿ ತೊಡಗಿರುತ್ತಾರೆ. ಎ.19 ರಂದು ರಜೆ (ನಿರ್ಬಂಧಿತ ರಜೆ) ಇದೆ. ಎ.20ರಂದು ಈಸ್ಟರ್ ಹಬ್ಬ ಆಚರಿಸಲಾಗುತ್ತದೆ. ಅಲ್ಲದೆ ಈ ವರೆಗೆ ನಡೆದ ಎಲ್ಲ ಪರೀಕ್ಷೆಗಳನ್ನು ಶನಿವಾರ ಮತ್ತು ಆದಿತ್ಯವಾರ ನಡೆಸಲಾಗಿದೆ. ಗುಡ್‌ಫ್ರೈಡೆ ದಿನ ನಿಗದಿಪಡಿಸಲಾದ ಪರೀಕ್ಷೆಯನ್ನು ಮುಂದೂಡುವಂತೆ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…