Featured

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ : ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ : ಸಿಎಂ – vishwanews24

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ : ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ : ಸಿಎಂ

ಬೆಂಗಳೂರು:ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.

ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago