Featured

ಗುದನಾಳಕ್ಕೆ ಏರ್ ಪ್ರೆಶರ್ ಪೈಪ್‍ನಿಂದ ಗಾಳಿ ಬಿಟ್ಟ ಸ್ನೇಹಿತ:‌ ಕರುಳು ಛಿದ್ರವಾಗಿ ಯುವಕ ಮೃತ್ಯು – vishwanews24

ಗುದನಾಳಕ್ಕೆ ಏರ್ ಪ್ರೆಶರ್ ಪೈಪ್‍ನಿಂದ ಗಾಳಿ ಬಿಟ್ಟ ಸ್ನೇಹಿತ:‌ ಕರುಳು ಛಿದ್ರವಾಗಿ ಯುವಕ ಮೃತ್ಯು

ಬೆಂಗಳೂರು: ತಮಾಷೆಗಾಗಿ ಸ್ನೇಹಿತನ ಗುದದ್ವಾರಕ್ಕೆ ಏರ್ ಪ್ರೆಶರ್ ಪೈಪ್‍ನಿಂದ ಗಾಳಿ ಬಿಟ್ಟ ಪರಿಣಾಮ ಒತ್ತಡ ಹೆಚ್ಚಾಗಿ ಹೊಟ್ಟೆಯೊಳಗಿನ ಕರುಳು ಛಿದ್ರವಾಗಿ ಯುವಕ ಮೃತಪಟ್ಟಿರುವ ಘಟನೆ ಇಲ್ಲಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯೋಗೇಶ್ (24) ಎಂಬಾತ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದ್ದು, ಆರೋಪಿ ಮುರುಳಿ ಎಂಬವನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೂಲತಃ ದೇವನಹಳ್ಳಿ ತಾಲೂಕಿನ ಯೋಗೇಶ್ ಥಣಿಸಂದ್ರದಲ್ಲಿ ಅಜ್ಜಿ ಮನೆಯಲ್ಲಿ ವಾಸವಾಗಿದ್ದು, ಫಾರ್ಮಾ ಕಂಪೆನಿಯೊಂದರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ತಂದೆ ಹಾಗೂ ಅಕ್ಕನೊಂದಿಗೆ ವಾಸವಾಗಿದ್ದ. ಎಪ್ರಿಲ್‍ನಲ್ಲಿ ಯೋಗೇಶ್ ಸಹೋದರಿಯ ವಿವಾಹ ನಿಶ್ಚಯವಾಗಿತ್ತು. ಹೀಗಾಗಿ ಮದುವೆ ಕೆಲಸ ಕಾರ್ಯಗಳಿಗಾಗಿ ಓಡಾಡುತ್ತಿದ್ದರು.

ಮಾ.25ರ ಸಂಜೆ ಥಣಿಸಂದ್ರದ ಸಿಎನ್‍ಎಸ್ ಕಾರ್ ಸ್ಪಾ ಸರ್ವೀಸ್ ಸೆಂಟರ್‍ಗೆ ಬೈಕ್ ಸರ್ವೀಸ್ ಮಾಡಿಸಲು ಹೋಗಿದ್ದ. ಈ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಮುರುಳಿ ಎಂಬಾತ ಯೋಗೇಶ್‍ಗೆ ಸ್ನೇಹಿತನಾಗಿದ್ದ. ಚಡ್ಡಿ ಧರಿಸಿ ನಿಂತಿದ್ದ ಯೋಗೇಶ್‍ನನ್ನು ನೋಡಿದ ಮುರುಳಿ, ತಮಾಷೆಗಾಗಿ ಹಿಂದೆಯಿಂದ ತೆರಳಿ ಏಕಾಏಕಿ ಆತನ ಗುದದ್ವಾರಕ್ಕೆ ಏರ್ ಪ್ರೆಶರ್ ನಿಂದ ಗಾಳಿ ಬಿಟ್ಟಿದ್ದಾನೆ ಎನ್ನಲಾಗಿದೆ.

ಗಾಳಿಯ ಒತ್ತಡ ಹೆಚ್ಚಾಗಿ ಹೊಟ್ಟೆಯೊಳಗಿನ ಕರುಳು ಸ್ಫೋಟಗೊಂಡು ಯೋಗೇಶ್ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕೂಡಲೇ ಆತನನ್ನು ಮುರುಳಿ ಹಾಗೂ ಇನ್ನಿತರರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಯೋಗೇಶ್ ಮೃತಪಟ್ಟಿದ್ದಾನೆ.

ಈ ಘಟನೆ ಸಂಬಂಧ ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಮುರುಳಿಯನ್ನು ಬಂಧಿಸಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಪ್ರಸಾದ್ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago