Featured

ಗುರುಪುರ : ಕಟೀಲಿನಿಂದ ಬಿ.ಸಿ.ರೋಡ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ ; ಏಳು ಮಂದಿ ಪ್ರಯಾಣಿಕರಿಗೆ ಗಾಯ – vishwanews24

ಗುರುಪುರ : ಕಟೀಲಿನಿಂದ ಬಿ.ಸಿ.ರೋಡ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ ; ಏಳು ಮಂದಿ ಪ್ರಯಾಣಿಕರಿಗೆ ಗಾಯ

ಗುರುಪುರ : ಕಟೀಲಿನಿಂದ ಬಿ.ಸಿ.ರೋಡ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕ ನಿಯಂತ್ರಣ ತಪ್ಪಿ ಗುರುಪುರ ಕೈಕಂಬದ ಬಳಿ ಪೊಳಲಿ ದ್ವಾರದ ಇಳಿಜಾರು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ 7 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಸಂಜೆ ವೇಳೆಯಾಗಿದ್ದರಿಂದ ಬಸ್‌ನಲ್ಲಿ ಪೂರ್ತಿ ಪ್ರಯಾಣಿಕರಿದ್ದು ಪೊಳಲಿ ದ್ವಾರದ ಬಳಿ ಜನರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಆದರೆ ಇಳಿಜಾರು ಪ್ರದೇಶದಲ್ಲಿ ಒಮ್ಮೆಲೆ ಚಲಿಸಿದೆ. ಆ ಕೂಡಲೆ ಬಸ್ ಚಾಲಕನ ಚಾಕಚಕ್ಯತೆಯಿಂದ ಬಸ್ ನ್ನು ಬಲಗಡೆಗೆ ತಿರುಗಿಸಿದ್ದಾನೆ.

ಆದರೆ ಚಾಲಕ ಬಲಗಡೆಗೆ ತಿರುಗಿಸಿದ್ದರಿಂದ ಮುಂಭಾಗದ ದರೆಗೆ ಬಡಿದು ಪಲ್ಟಿಯಾಗಿದೆ. ಬಸ್‌ನಲ್ಲಿ ಶಾಲಾ -ಕಾಲೇಜು ವಿದ್ಯಾರ್ಥಿಗಳು, ಕೆಲಸದಿಂದ ಮನೆಗೆ ಬರುವವರೇ ಹೆಚ್ಚಾಗಿದ್ದು ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ವೇಳೆ ಬಸ್ ಎಡಗಡೆಗೆ ಚಲಿಸಿದ್ದರೆ ಆಳವಾದ ಕಂದಕಕ್ಕೆ ಉರುಳಿ ಬೀಳುವ ಸಾಧ್ಯತೆ ಇತ್ತು. ಆಳಕ್ಕೆ ಇಳಿದಿದ್ದರೆ ಅಷ್ಟೂ ಜನ ಪ್ರಯಾಣಿಕರು ಅಪಾಯಕ್ಕೆ ಸಿಲುಕುತ್ತಿದ್ದರು. ಸುಮಾರು ಒಂದೂವರೆ ಗಂಟೆಯಷ್ಟು ಈ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಜ್ಪೆ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು. ಎರಡು ಕ್ರೇನ್ ಮೂಲಕ ಬಸ್ಸನ್ನು ಮೇಲಕ್ಕೆತ್ತಲಾಯಿತು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

12 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

12 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

13 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

13 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

13 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

13 hours ago