Featured

ಗುರುಪುರ : ಶಾಲಾ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ; ಮೂವರು ಆರೋಪಿಗಳ ಬಂಧನ -Vishwanews24

ಮಂಗಳೂರು : ಶಾಲಾ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ; ಮೂವರು ಆರೋಪಿಗಳ ಬಂಧನ -Vishwanews24

ಮಂಗಳೂರು, : ನಗರದ ಹೊರವಲಯದ ಗುರುಪುರ ವ್ಯಾಪ್ತಿಯಲ್ಲಿನ 14 ವರ್ಷದ ಶಾಲಾ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂವರನ್ನು ಮಂಗಳೂರು ಪೊಲೀಸರು ಶನಿವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಪೊಳಲಿ ನಿವಾಸಿ ಮುಹಮ್ಮದ್ ಮುನೀರ್ (28), ಕೈಕಂಬ ನಿವಾಸಿಗಳಾದ ತಸ್ವಿನ್ ಹಾಗೂ ಸಾದಿಕ್ ಬಂಧಿತ ಆರೋಪಿಗಳು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತ ಮುನೀರ್ ಪ್ರಧಾನ ಆರೋಪಿಯಾಗಿದ್ದು, ಇನ್ನುಳಿದವರು ಆತನಿಗೆ ಸಹಕಾರ ನೀಡಿದ್ದಾರೆ. ಈ ಸಂಬಂಧ ಇನ್ನೂ ಹಲವರನ್ನು ಬಂಧಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.

ಇದನ್ನೂ ಓದಿ :ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ : ಜೆಡಿಎಸ್ -Vishwanews24

ಗುರುಪುರ-ಕೈಕಂಬ ಪರಿಸರದಲ್ಲಿ ಶಾಲೆಗೆ ತೆರಳುವ ಮಾರ್ಗದಲ್ಲಿ ಅಲ್ಲಲ್ಲಿ ಯುವಕರ ಗುಂಪು ಇರುತ್ತದೆ. ವಿದ್ಯಾರ್ಥಿನಿಯರು, ಯುವತಿಯರೇ ಇವರ ಟಾರ್ಗೆಟ್. ಆರಂಭದಲ್ಲಿ ಸ್ನೇಹ ಬೆಳೆಸಿ, ತಿಂಡಿ-ತಿನಿಸು ಕೊಡಿಸುವುದು, ಇತರ ವಸ್ತುಗಳನ್ನು ತೋರಿಸಿ ತಮ್ಮ ಬಲೆಗೆ ಹಾಕಿಕೊಳ್ಳುತ್ತಾರೆ. ನಂತರ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನೀಡುತ್ತಿರುವುದು ಕಂಡುಬಂದಿದೆ. ಇದರ ಹಿಂದೆ ದೊಡ್ಡ ಜಾಲವೇ ಇರುವಂತೆ ಕಾಣಿಸುತ್ತಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಪ್ರಕರಣದಲ್ಲಿ ಪ್ರಧಾನ ಆರೋಪಿ ಮುನೀರ್ ಶಾಲೆಯ ಸಮೀಪ ನಿಂತುಕೊಂಡು ಬಾಲಕಿಗೆ ಆಮಿಷವೊಡ್ಡಿ ಸ್ನೇಹ ಬೆಳೆಸಿದ್ದಾನೆ. ವಸ್ತುಗಳನ್ನು ಗಿಫ್ಟ್ ಕೊಡುವ ಮೂಲಕ ಆಕರ್ಷಿಸಿದ್ದಾನೆ. ಕೊನೆಗೆ ಬಾಲಕಿಯಿಂದ ಮೊಬೈಲ್ ನಂಬರ್ ಪಡೆದು ಪ್ರೀತಿಯ ಬಲೆಗೆ ಬೀಳಿಸಿ, ಆಕೆಯ ಖಾಸಗಿ ಫೋಟೊ, ವೀಡಿಯೊಗಳನ್ನು ಪಡೆದುಕೊಂಡಿದ್ದಾನೆ. ಬಳಿಕ ಲೈಂಗಿಕವಾಗಿ ಸಹಕರಿಸದಿದ್ದಲ್ಲಿ ಫೋಟೊ, ವೀಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಹೀಗೆ ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದರು.

ಇದನ್ನೂ ಓದಿ :ಸಿಡಿ ಪ್ರಕರಣ : ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ : ಬಸವರಾಜ ಬೊಮ್ಮಾಯಿ -Vishwanews24

ಬಾಲಕಿಗೆ ಕಿರುಕುಳ ನೀಡುತ್ತಿರುವುದು ಪೋಷಕರ ಗಮನಕ್ಕೆ ಬಂದ ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯಕ್ಕೆ ಮೂವರ ಬಂಧನವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಪೈಕಿ ಮುನೀರ್ ವೃತ್ತಿಯಲ್ಲಿ ಚಾಲಕ. ಉಳಿದವರು ಕೂಡ ಅಪರಾಧದ ಇತಿಹಾಸ ಹೊಂದಿದ್ದಾರೆ ಎಂದರು.

ಸಂತ್ರಸ್ತರು ಮಾಹಿತಿ ನೀಡಲು ಕಮಿಷನರ್ ಮನವಿ: ಗುರುಪುರ ವ್ಯಾಪ್ತಿಯಲ್ಲಿ ಬಾಲಕಿಯರು, ಯುವತಿಯನ್ನು ಗುರಿಯಾಗಿಸಿಕೊಂಡು, ಪುಸಲಾಯಿಸಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬೃಹತ್ ಜಾಲ ಇರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನು ಹಲವು ಕಿರುಕುಳ ಪ್ರಕರಣಗಳು ನಡೆದಿರುವ ಶಂಕೆ ಇದೆ. ಸಂತ್ರಸ್ತರು ಮಾಹಿತಿಯನ್ನು ಹಂಚಿಕೊಳ್ಳಬಹುದಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಇದನ್ನೂ ಓದಿ :ಡಿ.ಕೆ.ಶಿ ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ : ಜೆ.ಸಿ.ಮಾಧುಸ್ವಾಮಿ -Vishwanews24

 

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

12 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

21 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

21 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

21 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

21 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago