ಬೈಂದೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಾರ್ಟಿ 60 ಹೊಸ ಮುಖಗಳಿಗೆ ಅವಕಾಶ ನೀಡಿರುವುದು ಸ್ವಾಗತಾರ್ಹ ಎಂದು ಚಿತ್ರನಟಿ, ಬಿಜೆಪಿ ಸ್ಟಾರ್ ಪ್ರಚಾರಕಿ ಶೃತಿ ಹೇಳಿದ್ದಾರೆ.
ಬೈಂದೂರಿನಲ್ಲಿ ಪಕ್ಷದ ಕಚೇರಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸಾಮಾನ್ಯ ಕಾರ್ಯಕರ್ತರ ಪಕ್ಷ ಎನ್ನುವುದನ್ನು ಈ ಬಾರಿ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದ ಶೃತಿ, ಹೊಸ ಮುಖಗಳು ಶಾಸಕರಾಗುವ ಮೂಲಕ ರಾಜ್ಯದಲ್ಲಿ ಅಮೂಲಾಗ್ರ ಬದಲಾವಣೆಯಾಗಲಿದೆ ಎಂದರು.
ಈಗಾಗಲೇ ಎಲ್ಲಾ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದು, ಪ್ರತಿದಿನ ಮಾಧ್ಯಮಗಳಲ್ಲಿ ಅಭ್ಯರ್ಥಿಗಳ ಆಸ್ತಿ, ಮೌಲ್ಯಗಳು ಹುಬ್ಬೇರಿಸುತ್ತಿವೆ. ಆದರೆ ಬೈಂದೂರು ಅಭ್ಯರ್ಥಿ ಗುರುರಾಜ ಶೆಟ್ಟಿಯವರ ಗುಣವೇ ಆಸ್ತಿ ಹಾಗೂ ಮೌಲ್ಯವಾಗಿರುವುದು ಬೈಂದೂರಿನ ಜನತೆಯ ಅದೃಷ್ಟ ಎಂದರು. ಈ ಬಾರಿ ಗುರುರಾಜ ಶೆಟ್ಟಿ ಗಂಟಿಹೊಳೆಯವರನ್ನು ಅತ್ಯಧಿಕ ಬಹುಮತದಲ್ಲಿ ಗೆಲ್ಲಿಸುವ ಮೂಲಕ ಬೈಂದೂರು ರಾಜ್ಯಕ್ಕೇ ಮಾದರಿಯಾಗಲಿದೆ ಎಂದು ಹೇಳಿದರು.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…