Featured

ಗುರ್ಮೆ ಫೌಂಡೇಶನ್- ಅಮ್ಮನ ನೆನಪಿಗಾಗಿ ಫೆಬ್ರವರಿ 20 ರಂದು “ಗುರ್ಮೆ ಗೋವಿಹಾರ ಲೋಕಾರ್ಪಣೆ” : ಗುರ್ಮೆ ಸುರೇಶ್ ಶೆಟ್ಟಿ Vishwanews24

ಗುರ್ಮೆ ಫೌಂಡೇಶನ್- ಫೆಬ್ರವರಿ 20 ರಂದು ಗುರ್ಮೆ ಗೋವಿಹಾರ ಲೋಕಾರ್ಪಣೆ : Vishwanews24

ಕಾಪು : ತಾಲೂಕಿನ ಗುರ್ಮೆ ಫೌಂಡೇಶನ್ ಪದ್ಮಶ್ರೀ, ಕಳತ್ತೂರು ಗುರ್ಮೆ, ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ನಾಲ್ಕನೇ ಪುಣ್ಯತಿಥಿಯ ಪ್ರಯುಕ್ತ ಗುರ್ಮೆ ಗೋ ವಿಹಾರ ಲೋಕಾರ್ಪಣೆಯು ಫೆಬ್ರವರಿ 20 ರಂದು ಸಂಜೆ 4 ಗಂಟೆಗೆ ಕಳತ್ತೂರು ಗುರ್ಮೆ ಇಲ್ಲಿ ಜರಗಲಿದೆ ಎಂದು ಫೌಂಡೇಶನ್ ಪ್ರವರ್ತಕ  ಗುರ್ಮೆ ಸುರೇಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಕೀರ್ತನ – ಸಾಂತ್ವನ – ಯಕ್ಷಗಾನ ಕಾರ್ಯಕ್ರಮದ ಅಂಗವಾಗಿ ಸಂಜೆ 4ಕ್ಕೆ ಶ್ರೀಕಾಂತ ಶೆಟ್ಟಿ ಕಾರ್ಕಳ ಮತ್ತು ಬಳಗ, ಸಂದೇಶ ಮತ್ತು ಬಳಗ ಮಂಗಳೂರು ಇವರಿಂದ ಭಜನಾ ಸಂಕೀರ್ತನೆ ನಡೆಯಲಿದೆ.

ಸಂಜೆ 4:30 ಕ್ಕೆ ಸಭಾಕಾರ್ಯಕ್ರಮ, 6:30 ಕ್ಕೆ ಭಜನಾ ಸಂಕೀರ್ತನೆ, 8 ರಿಂದ ಶ್ರೀಗುರು ನರಸಿಂಹ ದಶಾವತಾರ ಯಕ್ಷಗಾನ ಮಂಡಳಿ ಸಾಲಿಗ್ರಾಮ ಇವರಿಂದ ದಕ್ಷಯಜ್ಞ – ರಾಜಾ ರುದ್ರಕೋಪ ಎಂಬ ಕಾಲಮಿತಿ ಯಕ್ಷಗಾನ ಬಯಲಾಟ ಜರಗಲಿದೆ.


ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರಾದ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಸ್ವರ್ಣ ಪೀಠಿಕಾಪುರ ಗೌರಿ ಗದ್ದೆಯ ವಿನಯ ಗುರೂಜಿ, ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ.ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬೆಂಗಳೂರು ಎಂಆರ್ ಜಿ ಗ್ರೂಪ್ ಚೆಯರ್ರ್ಮನ್ ಕೆ. ಪ್ರಕಾಶ್ ಶೆಟ್ಟಿ, ಮೂಡಬಿದ್ರೆ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರವರ್ತಕರಾದ ಸತೀಶ್ ಪಿ ಶೆಟ್ಟಿ ಗುರ್ಮೆ,ಕೆ.ಪಿ ಶೆಟ್ಟಿ, ಶ್ಯಾಮ್ ಶೆಟ್ಟಿ, ಪೈಯ್ಯಾರು ಗಣೇಶ್ ಶೆಟ್ಟಿ, ಪೈಯ್ಯಾರು ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

25 minutes ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

45 minutes ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

1 hour ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

3 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

3 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

23 hours ago