ಕಾಪು : ತಾಲೂಕಿನ ಗುರ್ಮೆ ಫೌಂಡೇಶನ್ ಪದ್ಮಶ್ರೀ, ಕಳತ್ತೂರು ಗುರ್ಮೆ, ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ನಾಲ್ಕನೇ ಪುಣ್ಯತಿಥಿಯ ಪ್ರಯುಕ್ತ ಗುರ್ಮೆ ಗೋ ವಿಹಾರ ಲೋಕಾರ್ಪಣೆಯು ಫೆಬ್ರವರಿ 20 ರಂದು ಸಂಜೆ 4 ಗಂಟೆಗೆ ಕಳತ್ತೂರು ಗುರ್ಮೆ ಇಲ್ಲಿ ಜರಗಲಿದೆ ಎಂದು ಫೌಂಡೇಶನ್ ಪ್ರವರ್ತಕ ಗುರ್ಮೆ ಸುರೇಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಕೀರ್ತನ – ಸಾಂತ್ವನ – ಯಕ್ಷಗಾನ ಕಾರ್ಯಕ್ರಮದ ಅಂಗವಾಗಿ ಸಂಜೆ 4ಕ್ಕೆ ಶ್ರೀಕಾಂತ ಶೆಟ್ಟಿ ಕಾರ್ಕಳ ಮತ್ತು ಬಳಗ, ಸಂದೇಶ ಮತ್ತು ಬಳಗ ಮಂಗಳೂರು ಇವರಿಂದ ಭಜನಾ ಸಂಕೀರ್ತನೆ ನಡೆಯಲಿದೆ.
ಸಂಜೆ 4:30 ಕ್ಕೆ ಸಭಾಕಾರ್ಯಕ್ರಮ, 6:30 ಕ್ಕೆ ಭಜನಾ ಸಂಕೀರ್ತನೆ, 8 ರಿಂದ ಶ್ರೀಗುರು ನರಸಿಂಹ ದಶಾವತಾರ ಯಕ್ಷಗಾನ ಮಂಡಳಿ ಸಾಲಿಗ್ರಾಮ ಇವರಿಂದ ದಕ್ಷಯಜ್ಞ – ರಾಜಾ ರುದ್ರಕೋಪ ಎಂಬ ಕಾಲಮಿತಿ ಯಕ್ಷಗಾನ ಬಯಲಾಟ ಜರಗಲಿದೆ.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರಾದ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಸ್ವರ್ಣ ಪೀಠಿಕಾಪುರ ಗೌರಿ ಗದ್ದೆಯ ವಿನಯ ಗುರೂಜಿ, ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ.ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬೆಂಗಳೂರು ಎಂಆರ್ ಜಿ ಗ್ರೂಪ್ ಚೆಯರ್ರ್ಮನ್ ಕೆ. ಪ್ರಕಾಶ್ ಶೆಟ್ಟಿ, ಮೂಡಬಿದ್ರೆ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರವರ್ತಕರಾದ ಸತೀಶ್ ಪಿ ಶೆಟ್ಟಿ ಗುರ್ಮೆ,ಕೆ.ಪಿ ಶೆಟ್ಟಿ, ಶ್ಯಾಮ್ ಶೆಟ್ಟಿ, ಪೈಯ್ಯಾರು ಗಣೇಶ್ ಶೆಟ್ಟಿ, ಪೈಯ್ಯಾರು ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…