ಕಾಪು: ಬಿಜೆಪಿ ರಾಷ್ಟ್ರ , ರಾಜ್ಯ ಮತ್ತು ಜಿಲ್ಲೆ ನಾಯಕರ ಶಿಫಾರಸ್ಸಿನ ಮೇರೆಗೆ ಕಾಪು ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ನೇಮಕಗೊಂಡಿದ್ದಾರೆ.
ಉದ್ಯಮ ಮತ್ತು ಸಮಾಜಸೇವಕರಾಗಿರುವ ಅವರು 2014 ರಲ್ಲಿ ಬಿಜೆಪಿ ಗೆ ಸೇರ್ಪಡೆ ಗೊಂಡಿದ್ದರು.ಕಳೆದ ಲೋಕಸಭೆ,ಗ್ರಾಮಪಂಚಾಯತ್, ತಾ.ಪಂ ಮತ್ತು ಜಿ.ಪಂ ಚುನಾವಣೆ ಹಾಗೂ ಕಾಪು ಪುರಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ವಿಶೇಷ ಪ್ರಯತ್ನ ನಡೆಸಿದ್ದ ಅವರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಗಿ , ಕಾಪು ಕ್ಷೇತ್ರ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ವಿಧಾನಸಭಾ ಚುನಾವಣೆಯ ಕಾಪು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಕೊನೆ ಘಳಿಗೆಯಲ್ಲಿ ಟಿಕೆಟ್ ವಂಚಿತರಾಗಿದ್ದು ಇದರಿಂದ ಪಕ್ಷದ ಮುಖಂಡರು, ಕಾರ್ಯಕರ್ತರು , ಅಭಿಮಾನಿಗಳು ನಿರಾಸೆಗೊಳಗಾಗಿದ್ದರು.
ಆದರೆ ಇದೀಗ ಸುರೇಶ್ ಶೆಟ್ಟಿ ಗುರ್ಮೆ ಅವರಿಗೆ ಪಕ್ಷದ ಮಹತ್ವದ ಜವಾಬ್ದಾರಿಯನ್ನು ನೀಡಿದ್ದು, ಅವರು ಬಿಜೆಪಿ ಅಭ್ಯರ್ಥಿ ಲಾಲಜಿ ಆರ್. ಮೆಂಡನ್ ಅವರ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…