Featured

ಗುಲಾಬ್ ಚಂಡಮಾರುತ : ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಅ. 1 ರವರೆಗೆ ಎಲ್ಲೋ ಅಲರ್ಟ್ ಘೋಷಣೆ -Vishawanews24

ಗುಲಾಬ್ ಚಂಡಮಾರುತ : ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಅ. 1 ರವರೆಗೆ ಎಲ್ಲೋ ಅಲರ್ಟ್ ಘೋಷಣೆ -Vishawanews24

ಮಂಗಳೂರು : ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಗುಲಾಬ್ ಚಂಡ ಮಾರುತದಿಂದಾಗಿ ಕರಾವಳಿಯ ಭಾಗದಲ್ಲಿ ಮಳೆ ಪ್ರಾರಂಭವಾಗಿದೆ. ಇಂದು ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆ ಮುಂದುವರೆದಿದ್ದು, ಅಕ್ಟೋಬರ್ 1 ರವರೆಗೆ ಕರಾವಳಿಯ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ಬಂಗಾಳ ಕೊಲ್ಲಿಗೆ ಗುಲಾಬ್ ಚಂಡ ಮಾರುತ ಅಪ್ಪಳಿಸಿದ್ದು, ವಿವಿಧ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 1ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಗುಲಾಬ್​ ಚಂಡಮಾರುತದ ವೇಗ ಗಂಟೆಗೆ 70-80 ಕಿ.ಮೀ. ಇರಲಿದೆ. ಚಂಡಮಾರುತ ಹಾದುಹೋಗಲಿರುವ ಕಾಳಿಂಗಪಟ್ಟಣಂ, ವಿಶಾಖಪಟ್ಟಣಂ ಮತ್ತು ಗೋಪಾಲಪುರಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

21 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

22 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

22 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

23 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

23 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

23 hours ago