ಬೆಂಗಳೂರು: ಕಳೆದ ಎರಡ್ಮೂರು ತಿಂಗಳುಗಳಿಂದ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿಲ್ಲ. ಇದಕ್ಕೆ ರಾಜ್ಯದಾದ್ಯಂತ ಮಹಿಳೆಯರು, ಫಲಾನುಭವಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ, ‘ಅದೇನು ತಿಂಗಳ ಸಂಬಳ ಅಲ್ವಲ್ಲಾ’ ಎಂದು ಸಚಿವ ಕೆಜೆ ಜಾರ್ಜ್ ಉಡಾಫೆ ಉತ್ತರ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ದುಡ್ಡು ಬಂದಿಲ್ಲ ಎಂದು ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಸಚಿವರು ಮಾತ್ರ ಉಡಾಫೆ ಉತ್ತರ ಕೊಟ್ಟಿದ್ದಾರೆ. ಪ್ರತಿ ತಿಂಗಳೂ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ವರ್ಗಾವಣೆ ಮಾಡುತ್ತೇವೆ ಎಂದು ಚುನಾವಣೆಯ ವೇಳೆ ಮಾತು ಕೊಟ್ಟು ಅಧಿಕ್ಕಾರಕ್ಕೇರಿದ್ದರು. ಆದರೆ ಈಗ, ಗೃಹಲಕ್ಷ್ಮಿ ಹಣ ತಿಂಗಳ ತಿಂಗಳ ಸಂಬಳ ಅಲ್ವಲ್ಲಾ ಎಂದು ಜಾರ್ಜ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಕೂಡ ಹಾರಿಕೆ ಉತ್ತರ ನೀಡಿದರು. ಸಿಎಂ ಸಿದ್ದರಾಮಯ್ಯ ಯಾವುದೇ ಗ್ಯಾರಂಟಿ ನಿಲ್ಲಿಸಲ್ಲ, ಸದ್ಯದಲ್ಲೇ ಹಣ ಹಾಕುತ್ತೇವೆ ಎಂದು ಭರವಸೆ ಹೇಳಿದರು.
ಈ ನಡುವೆ ಗ್ಯಾರಂಟಿ ನೀಡುತ್ತೇವೆ ಎಂದು ಘೋಷಿಸಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರದ ಸಚಿವರಿಂದ ಇಂತಹ ಬೇಜವಾಬ್ಧಾರಿಯುತ ಉತ್ತರ ಬಂದಿರುವುದಕ್ಕೆ ಸಾರ್ವಜನಿಕಕರಿಂದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…