ಗೃಹಲಕ್ಷ್ಮಿ ನಿರಂತರ ಪ್ರಕ್ರಿಯೆ ; ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಲಕ್ಷ್ಮಿ ಹೆಬ್ಬಾಳ್ಕರ್‌ – vishwanews24

Featured, ರಾಜ್ಯ ನ್ಯೂಸ್

ಗೃಹಲಕ್ಷ್ಮಿ ನಿರಂತರ ಪ್ರಕ್ರಿಯೆ ; ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌  ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನುನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ದಸರಾ ಹಬ್ಬ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದರು.

ಸೆ.29 ಕ್ಕೆ ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’ – vishwanews24

 

Leave a Reply