ಬೆಂಗಳೂರು: ಗೃಹಜ್ಯೋತಿ ಬೆನ್ನಲ್ಲೇ ತನ್ನ ಮತ್ತೊಂದು ಜನಪ್ರಿಯ ಗ್ಯಾರಂಟಿ ಯೋಜನೆ ‘ಗೃಹಲಕ್ಷ್ಮಿ’ ಪರಿಷ್ಕರಣೆಗೆ ಸರ್ಕಾರ ಕೈಹಾಕಲು ನಿರ್ಧರಿಸಿದ್ದು ಇನ್ಮುಂದೆ ಮಾಸಿಕ 2000 ರೂಪಾಯಿ ಪಡೆಯಲು ರಾಜ್ಯದ ‘ಗೃಹಲಕ್ಷ್ಮಿ’ಯರ ಬಯೋಮೆಟ್ರಿಕ್ ಅಥವಾ ಫೇಷಿಯಲ್ ಅಥೆಂಟಿಕೇಷನ್ (ಮುಖಚಹರೆ ದೃಢೀಕರಣ) ಕಡ್ಡಾಯ..
ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಸರ್ಕಾರ ನಿರ್ಣಯ ಕೈಗೊಂಡಿದೆ. ಅದರಂತೆ ರಾಜ್ಯದಲ್ಲಿ ‘ಗೃಹಲಕ್ಷ್ಮಿ ಯೋಜನೆ’ ಅಡಿ 20 ಕೋಟಿ ರೂ. ವೆಚ್ಚದಲ್ಲಿ ಬಯೋಮೆಟ್ರಿಕ್ ಅಥವಾ ಫೇಷಿಯಲ್ ಅಥೆಂಟಿಕೇಷನ್ ದೃಢೀಕರಣ ಮೂಲಕ ಫಲಾನುಭವಿಗಳನ್ನು ಮರುಪರಿಶೀಲನೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಈ ಮಾಹಿತಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಫೇಷಿಯಲ್ ಅಥೆಂಟಿಕೇಷನ್ ಮತ್ತು ಬಯೋಮೆಟ್ರಿಕ್ ಮೂಲಕ ಫಲಾನುಭವಿಗಳ ಪರಿಶೀಲನೆ ನಡೆಸಿ ಅರ್ಹರಿಗೆ ಮಾತ್ರ ಯೋಜನೆ ತಲುಪುವಂತೆ ಮಾಡಲು ನಿರ್ಧರಿಸಿದ್ದೇವೆ. ಇದಕ್ಕಾಗಿ 20 ಕೋಟಿ ಹಣ ನೀಡಿದ್ದೇವೆ’ ಎಂದು ಸ್ಪಷ್ಟಪಡಿಸಿದರು.
ಬಯೋಮೆಟ್ರಿಕ್ ಹಾಗೂ ಬ್ಯಾಂಕ್ ಖಾತೆಯ ಸಂಖ್ಯೆ, ದೂರವಾಣಿ ಸಂಖ್ಯೆ ಸರಿಯಾಗಿರಬೇಕು. ಯಾರದ್ದೋ ದೂರವಾಣಿ ಹಾಗೂ ಬ್ಯಾಂಕ್ ಖಾತೆಗಳ ವಿವರಗಳನ್ನು ನೀಡುವಂತಿಲ್ಲ. ಗಂಡ ಹಾಗೂ ಮಕ್ಕಳ ಖಾತೆಯನ್ನೂ ಪರಿಗಣಿಸುವುದಿಲ್ಲ. ಸಿಎಜಿ ವರದಿಯಲ್ಲಿ ಏನೆಲ್ಲ ವರದಿಯಾಗಿದೆ ಎಂಬುದು ನೋಡಿದ್ದೇವೆ. ಹೀಗಾಗಿ ಅಂತಹದ್ದಕ್ಕೆ ಅವಕಾಶ ನೀಡದಂತೆ ಪರಿಶೀಲನೆ ನಡೆಸಿ ಅರ್ಹರಿಗೆ ನೀಡುತ್ತೇವೆ ಎಂದು ವಿವರಿಸಿದರು.
ಯಾರನ್ನೂ ಯೋಜನೆಯಿಂದ ಕೈಬಿಡುವುದಿಲ್ಲ. ಇಚ್ಛಿಸಿದವರು ಸ್ವಯಂಪ್ರೇರಿತವಾಗಿ ಬಿಟ್ಟುಕೊಡಲು ಅವಕಾಶ ಕಲ್ಪಿಸಲಾಗಿದೆ ಎಂದೂ ಅವರು ಹೇಳಿದರು.
ಮರುಪರಿಶೀಲನಾ ಅರ್ಜಿ ಹೇಗಿರಬೇಕು? ಅದರಲ್ಲಿ ಫಲಾನುಭವಿಗಳ ಯಾವ್ಯಾವ ಮಾಹಿತಿ ಸಂಗ್ರಹಿಸಬೇಕು? ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ ಒಳಗೊಂಡಂತೆ ಮತ್ತಿತರ ವಿಷಯಗಳ ಉಲ್ಲೇಖದ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ. ಗೃಹಲಕ್ಷ್ಮಿ ಹಣ ನೇರವಾಗಿ ಫಲಾನುಭವಿಗಳಿಗೇ ಹೋಗಬೇಕು ಎನ್ನುವುದು ಇದರ ಉದ್ದೇಶ ಎಂದು ಸಿಎಂ ತಿಳಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…