ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ ವರದಿ ಹೇಳಿದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆ ಯಾವುದೇ ಗೋಲ್‌ಮಾಲ್ ಆಗಿಲ್ಲ ಎಂದು ಡೇಟಾ ಸಮೇತ ಸ್ಪಷ್ಟೀಕರಣ ನೀಡಿದೆ.
ಗೃಹಲಕ್ಷ್ಮಿ ಯೋಜನೆಯ ಒಟ್ಟು 2,88,376 ಫಲಾನುಭವಿಗಳು ಸಾವನ್ನಪ್ಪಿದ್ದಾರೆ. ಆ ಪೈಕಿ 1,03,922 ಮೃತ ಫಲಾನುಭವಿಗಳ ಕುಟುಂಬದಲ್ಲಿ ಯಜಮಾನಿಯ ಹೆಸರು ಬದಲಾವಣೆ ಆಗಿ, ಮರು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ 1,08,755 ಮೃತ ಫಲಾನುಭವಿಗಳ ಮರಣದ ವಿವರ ಸಕಾಲಕ್ಕೆ ಲಭ್ಯವಾಗಿಲ್ಲ. ಹೀಗಾಗಿ ಇಲ್ಲಿ ಯಾವುದೇ ತಾಂತ್ರಿಕ ದೋಷವಾಗಿಲ್ಲ. ಆಧಾರ್ ಬೇಸ್ಡ್ ಪೇಮೆಂಟ್ ಸಿಸ್ಟಮ್‌ನಲ್ಲಿ ಬ್ಯಾಂಕ್ ಖಾತೆ ವಿವರ ಲಭ್ಯವಾಗುತ್ತದೆ. ಮೃತ ಫಲಾನುಭವಿಗಳ ಅಕೌಂಟ್‌ಗೆ 115 ಕೋಟಿ ರೂ. ಪಾವತಿಯಾಗಿದ್ದು, ಈ ಪೈಕಿ 15.24 ಕೋಟಿ ರೂ. ರಿಕವರಿ ಮಾಡಿದ್ದೇವೆ. ಉಳಿದ ಹಣವನ್ನು ರಿಕವರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದೆ.
ಫಲಾನುಭವಿಗಳು ಖಾತೆ ಹೊಂದಿರುವ ಬ್ಯಾಂಕ್‌ನ ತಾಂತ್ರಿಕ ದೋಷದಿಂದ ತಪ್ಪಾದ ಬ್ಯಾಂಕ್ ಖಾತೆ ವಿವರ ಕಡತದಲ್ಲಿ ಹಂಚಿಕೆಯಾಗಿರಬಹುದು. ಜಂಟಿ ಬ್ಯಾಂಕ್ ಖಾತೆಯಿದ್ದಲ್ಲಿ ಒಂದೇ ಬ್ಯಾಂಕ್ ಖಾತೆಗೆ ಒಂದಕ್ಕಿಂತ ಹೆಚ್ಚು ಫಲಾನುಭವಿಗಳ ಸರ್ಕಾರಿ ಸೌಲಭ್ಯ ಜಮೆಯಾಗಿರಬಹುದು. ಜಂಟಿ ಖಾತೆ ಇರುವಂತಹ ಫಲಾನುಭವಿಗಳ ಅತ್ತೆ-ಸೊಸೆ, ಅಮ್ಮ-ಮಗಳ ಬ್ಯಾಂಕ್ ಖಾತೆಗೆ ದುಡ್ಡು ಪಾವತಿಯಾಗಿದೆ. ಬೇರೆ ಬೇರೆ ಪಡಿತರ ಚೀಟಿ ಹೊಂದಿದ್ದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿರೋದ್ರಿಂದ ಎರಡೂ ಫಲಾನುಭವಿಗಳ ಮೊತ್ತ ಒಂದೇ ಖಾತೆಗೆ ಪಾವತಿ ಆಗಿರಬಹುದು ಎಂದು ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…