Featured

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನಗದು ನೀಡುವ ‘ಗೃಹಲಕ್ಷ್ಮಿ ಯೋಜನೆ’ಯ 31ನೆ ಕಂತಿನ 2,400ಕೋಟಿ ರೂ.ಹಣವನ್ನು ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿನ 1.24 ಕೋಟಿಗೂ ಅಧಿಕ ಕುಟುಂಬದ ಮನೆಯ ಯಜಮಾನಿಯರಿಗೆ ಈವರೆಗೆ 30 ಕಂತುಗಳಲ್ಲಿ ತಲಾ 2ಸಾವಿರ ರೂ.ನಂತೆ 60 ಸಾವಿರ ರೂ.ಗಳನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮುಖಾಂತರ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿತ್ತು. ಇದೀಗ 31ನೇ ಕಂತಿನ 2,400 ಕೋಟಿ ರೂ.ಹಣ ಬಿಡುಗಡೆ ಮಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ, ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಇದನ್ನೂ ಓದಿ :

ಗುರುವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಈ ಮೂಲಕ ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರಕಾರ ಇದುವರೆಗೂ 74,650 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಇದರಿಂದ ಫಲಾನುಭವಿ ಮನೆಯ ಯಜಮಾನಿ ಖಾತೆಗೆ ಒಟ್ಟು 62 ಸಾವಿರ ರೂ.ಹಣವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ನೀಡಿದಂತೆ ಆಗಿದೆ ಎಂದು ಹೇಳಿದ್ದಾರೆ.

ಕುಟುಂಬದ ದೈನಂದಿನ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ, ಆಹಾರ ಹಾಗೂ ಇತರೆ ಅಗತ್ಯಗಳಿಗೆ ಬಳಕೆ ಮಾಡಿಕೊಳ್ಳಬೇಕೆಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಹಿಳೆಯರು ಸ್ವಾವಲಂಬಿಗಳಾಗಲಿ ಎಂದು ನಮ್ಮ ಸರಕಾರ ಮನೆಯ ಯಜಮಾನಿಯರಿಗೆ 31ಕಂತುಗಳಲ್ಲಿ ತಲಾ 2ಸಾವಿರ ರೂ.ನಂತೆ ಇದುವರೆಗೂ 62ಸಾವಿರ ರೂ. ಹಣವನ್ನು ನೀಡಿದೆ. ಕಾಂಗ್ರೆಸ್ ಸರಕಾರ ಮಹಿಳೆಯರ ಪರ ಸರಕಾರ ಎಂಬುದಕ್ಕೆ ಇದೇ ಸಾಕ್ಷಿ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago