Featured

ಗೃಹಲಕ್ಷ್ಮಿ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ: ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮನವಿ – vishwanews24

ಗೃಹಲಕ್ಷ್ಮಿ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ: ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮನವಿ

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಮಹಿಳೆಯರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಮನೆಯೊಡತಿಯರಿಗೆ / ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್​ಗಳು ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್​ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ‌ ಎಂದು ಅವರು ಉಲ್ಲೇಖಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂದೇಶ

ಮತ್ತೊಂದು ಸಂದೇಶದಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ನಾಡಿನ ಕೋಟ್ಯಂತರ ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿದೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿ ಪಯಣದೊಂದಿಗೆ ಒಂದು ವರ್ಷ ಪೂರೈಸಿದೆ. ಈ ಯಶಸ್ವಿ ಪಯಣದ ಸಂಭ್ರಮದಲ್ಲಿ ತಾವೂ ಭಾಗವಹಿಸಿ, ಗೃಹಲಕ್ಷ್ಮಿಯಿಂದ ತಮಗಾದ ಉಪಯುಕ್ತತೆ ಕುರಿತು ಅನಿಸಿಕೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

6 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

6 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

6 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

7 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

7 hours ago