ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಮಹಿಳೆಯರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಮನೆಯೊಡತಿಯರಿಗೆ / ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್ಗಳು ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ ಎಂದು ಅವರು ಉಲ್ಲೇಖಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂದೇಶ
ಮತ್ತೊಂದು ಸಂದೇಶದಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ನಾಡಿನ ಕೋಟ್ಯಂತರ ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿದೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿ ಪಯಣದೊಂದಿಗೆ ಒಂದು ವರ್ಷ ಪೂರೈಸಿದೆ. ಈ ಯಶಸ್ವಿ ಪಯಣದ ಸಂಭ್ರಮದಲ್ಲಿ ತಾವೂ ಭಾಗವಹಿಸಿ, ಗೃಹಲಕ್ಷ್ಮಿಯಿಂದ ತಮಗಾದ ಉಪಯುಕ್ತತೆ ಕುರಿತು ಅನಿಸಿಕೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…