Featured

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ರಾಜ್ಯದ ಸುಮಾರು 1.26 ಕೋಟಿ ಫಲಾನುಭವಿಗಳ ದಾಖಲೆಗಳನ್ನು ಈ ಸಂದರ್ಭದಲ್ಲಿ ಮರುಪರಿಶೀಲಿಸಲಾಗುತ್ತದೆ.

ಗೃಹಲಕ್ಷ್ಮಿ ಮರುಪರಿಶೀಲನಾ ಕಾರ್ಯ ಶೀಘ್ರವೇ ಆರಂಭಕ್ಕೆ ಸಿದ್ಧತೆ ನಡೆಸಿರುವ ರಾಜ್ಯ ಸರ್ಕಾರ, ಫಲಾನುಭವಿಗಳ ಅರ್ಜಿ ಸಲ್ಲಿಕೆ ಫಾರ್ಮ್ ಅಂತಿಮಗೊಳಿಸಿದೆ. ಚುನಾವಣೆ ಮಾದರಿ ನೀತಿ ಸಂಹಿತೆ ಮುಗಿದ ಬಳಿಕ ಸರ್ವೆ ಆರಂಭ ಆಗುವ ಸಾಧ್ಯತೆ ಇದೆ. ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನಾ ಅರ್ಜಿಯಲ್ಲಿ ಹಲವು ಹೊಸ ಪ್ರಶ್ನೆಗಳ ಸೇರ್ಪಡೆ ಮಾಡಲಾಗಿದೆ. SIR ಮಾದರಿಯಲ್ಲೇ ಗೃಹಲಕ್ಷ್ಮಿ ಮರು ಪರಿಶೀಲನಾ ಅರ್ಜಿ ಇದ್ದು, ಆ್ಯಪ್‌ನಲ್ಲಿ ಸರ್ವೆ ಆದರೂ ಕೂಡ ಆಫ್‌ಲೈನ್ ಮರುಪರಿಶೀಲನಾ ಅರ್ಜಿ ಭರ್ತಿ ಮಾಡಲೇಬೇಕು. ಬ್ಯಾಂಕ್ ಖಾತೆ, ಆಧಾರ್ ಜೋಡಣೆ , ಪಡಿತರ ಚೀಟಿ ಸಂಖ್ಯೆ ಸಂಬಂಧ ಹಲವು ಪ್ರಶ್ನೆ ಸೇರ್ಪಡೆ ಮಾಡಲಾಗಿದೆ.

ಇದನ್ನೂ ನೋಡಿ: 

ಈ ಹಿಂದೆ ಆಗಿದ್ದ ಲೋಪಗಳನ್ನು ಸರಿಪಡಿಸುವತ್ತ ಸರ್ಕಾರ ಗಮನಹರಿಸಿದೆ. ಹೀಗಾಗಿ ಅನ್ಯ ರಾಜ್ಯದ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಆಗದಂತೆ ಕ್ರಮ ಕೈಗೊಳ್ಳಲು ಅರ್ಜಿಯಲ್ಲಿ ಹಲವು ಹೊಸ ಪ್ರಶ್ನಾವಳಿಗಳನ್ನು ಕೇಳಲಾಗಿದೆ. ಇನ್ನು ಈ ಹೊಸ ಅರ್ಜಿಯೊಂದಿಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಸರ್ವೇ ಮಾಡಲಿದ್ದು, ಮರುಪರಿಶೀಲನಾ ಕಾರ್ಯದ ಮೇಲೆ ನಿಗಾ ವಹಿಸಲು ಜಿಲ್ಲಾ, ತಾಲೂಕು, GBA ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಇನ್ನು ಆ್ಯಪ್ ನಲ್ಲಿ ಸರ್ವೆ ಆದರೂ ಕೂಡ ಆಫ್ ಲೈನ್ ಮರುಪರಿಶೀಲನಾ ಅರ್ಜಿ ಭರ್ತಿ ಕಡ್ಡಾಯಗೊಳಿಸಲಾಗಿದೆ. ಬ್ಯಾಂಕ್ ಖಾತೆ, ಆಧಾರ್ ಜೋಡಣೆ , ಪಡಿತರ ಚೀಟಿ ಸಂಖ್ಯೆ ಸಂಬಂಧ ಹಲವು ಪ್ರಶ್ನೆಗಳನ್ನು ಮರುಪರೀಲನಾ ಅರ್ಜಿಯಲ್ಲಿ ಸೇರ್ಪಡೆ ಮಾಡಲಾಗಿದೆ.

ಗೃಹಜ್ಯೋತಿ ಯೋಜನೆಯಲ್ಲಿ ನಡೆದ ಪರಿಶೀಲನೆಯ ಮಾದರಿಯಲ್ಲೇ ಈ ಕಾರ್ಯಾಚರಣೆ ನಡೆಯಲಿದ್ದು, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪೂರ್ಣಗೊಂಡ ಬಳಿಕ ಪ್ರಕ್ರಿಯೆ ಆರಂಭಿಸುವ ಸಾಧ್ಯತೆ ಇದೆ. ಇಲಾಖೆಯ ಸಿಬ್ಬಂದಿ ಸದ್ಯ ಬೂತ್ ಮಟ್ಟದ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ನಂತರ ಈ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತದೆ.

ಇದನ್ನೂ ನೋಡಿ: 

ಮರುಪರಿಶೀಲನೆಯ ಸಂದರ್ಭದಲ್ಲಿ ನಿಯೋಜಿತ ಸಿಬ್ಬಂದಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಮನೆ-ಮನೆಗೆ ತೆರಳಿ ಫಲಾನುಭವಿಗಳ ವಿವರಗಳನ್ನು ಸಂಗ್ರಹಿಸಲಿದ್ದಾರೆ. ಮಾಹಿತಿಯನ್ನು ಭೌತಿಕ ದಾಖಲೆಗಳ ಜೊತೆಗೆ ಡಿಜಿಟಲ್ ರೂಪದಲ್ಲೂ ದಾಖಲಿಸಲಾಗುತ್ತದೆ. ಫಲಾನುಭವಿಗಳು ನಿಗದಿತ ಸೇವಾ ಕೇಂದ್ರಗಳಿಗೆ ತೆರಳಿ ಕೂಡ ಪರಿಶೀಲನೆ ಪೂರ್ಣಗೊಳಿಸಲು ಅವಕಾಶ ಇರಲಿದೆ.

ಮರುಪರಿಶೀಲನಾ ಅರ್ಜಿಯಲ್ಲಿ ಏನೆಲ್ಲಾ ಇದೆ?
ಈ ಪ್ರಕ್ರಿಯೆ ಹೊಸ ಫಲಾನುಭವಿಗಳನ್ನು ಸೇರ್ಪಡೆ ಮಾಡಲು ಅಲ್ಲ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯುತ್ತಿರುವವರ ಅರ್ಹತೆ ಮತ್ತು ದಾಖಲೆಗಳನ್ನು ಮಾತ್ರ ಪರಿಶೀಲಿಸಲಾಗುತ್ತದೆ. ದೇಶದ ಯಾವುದೇ ಬ್ಯಾಂಕ್ ಖಾತೆಯಾಗಲಿ ಆದರೆ ಕರ್ನಾಟಕದಲ್ಲಿ ಆ ಬ್ಯಾಂಕ್ ಬ್ರಾಂಚ್ ಇರಬೇಕು. ಫಲಾನುಭವಿಯು ಕರ್ನಾಟಕ ರಾಜ್ಯದ ವ್ಯಾಪ್ತಿಯೊಳಗಿನ ಶಾಖೆಯಲ್ಲಿ ಖಾತೆ ಹೊಂದಿರಬೇಕು. ಬ್ಯಾಂಕ್‌ನಲ್ಲಿ ಸಾಲ ಪಡೆಯದ ಖಾತೆಯ ಅಕೌಂಟ್ ನಂಬರ್ ಗೃಹಲಕ್ಷ್ಮಿ ಯೋಜನೆಗೆ ಕೊಡಬೇಕು. ಜಂಟಿ ಖಾತೆ ಕೊಡಬಾರದು. ಪಡಿತರ ಚೀಟಿ ಸಂಖ್ಯೆ ಕಡ್ಡಾಯ. ಮೊಬೈಲ್‌ಗೆ ಆಧಾರ್ ಸಂಖ್ಯೆ ಆಗದವರು, ಮೊಬೈಲ್‌ಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯ. ಇಂತಹ ಹಲವು ಅಂಶಗಳನ್ನು ಅರ್ಜಿ ಒಳಗೊಂಡಿದೆ. ಮುಖ್ಯಮಂತ್ರಿಗಳಿಂದ ಅಧಿಕೃತ ಸೂಚನೆ ಸಿಕ್ಕ ಬಳಿಕ ಗೃಹಲಕ್ಷ್ಮಿ ಮರುಪರಿಶೀಲನಾ ಅರ್ಜಿ ಸರ್ವೆ ಆರಂಭ ಆಗಲಿದೆ.

ಫಲಾನುಭವಿಗಳಿಗೆ ಏನೆಲ್ಲಾ ಕಡ್ಡಾಯ?
ದೇಶದ ಯಾವುದೇ ಬ್ಯಾಂಕ್ ಖಾತೆಯಾಗಲಿ ಆದರೆ ಕರ್ನಾಟಕದಲ್ಲಿ ಬ್ಯಾಂಕ್ ಖಾತೆ ಇರಬೇಕು.
ಬ್ಯಾಂಕ್ ನಲ್ಲಿ ಸಾಲ ಪಡೆಯದ ಖಾತೆಯ ಅಕೌಂಟ್ ನಂಬರ್ ಗೃಹಲಕ್ಷ್ಮೀ ಯೋಜನೆಗೆ ಕೊಡಬೇಕು
ಜಂಟಿ ಖಾತೆ ಕೊಡಬಾರದು, ವೈಯಕ್ತಿಕ ಖಾತೆ ಇರಬೇಕು.
ಪಡಿತರ ಚೀಟಿ ಸಂಖ್ಯೆ ಕಡ್ಡಾಯ
ಮೊಬೈಲ್ ಗೆ ಆಧಾರ್ ಸಂಖ್ಯೆ ಆಗದವರು. ಮೊಬೈಲ್ಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯ
ನಿವೃತ್ತಿ ಪಿಂಚಣಿ ಪಡೆಯುತ್ತಿದ್ದರೆ, ಮಾಹಿತಿ ನೀಡುವುದು.

ಇದನ್ನೂ ನೋಡಿ: 

Vishwa News 24

Recent Posts

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

5 hours ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

2 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

4 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

4 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

4 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

4 days ago