ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ. ಈ ಮೂಲಕ ಕುಟುಂಬದ ಮನೆ ಯಜಮಾನಿಯರಿಗೆ ಇವರೆಗೂ ತಲಾ 64 ಸಾವಿರ ರೂ. ಸಂದಾಯ ಮಾಡಿದೆ. ಈ ಯೋಜನೆಗೆ ಅಗತ್ಯವಿರುವ 2443 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡುಗಡೆಗೊಳಿಸಿದ್ದಾರೆ.
ಜಿಬಿಎ ವ್ಯಾಪ್ತಿಯ ಯಲಹಂಕ, ಬ್ಯಾಟರಾಯನಪುರ, ಹೆಬ್ಬಾಳ, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಮುಂದಿನ ಮೂರ್ನಾಲ್ಕು ದಿನದಲ್ಲಿ ಕುಟುಂಬದ ಯಜಮಾನಿಯರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಜಮೆ ಆಗಲಿದೆ. ಈವರೆಗೂ ತಲಾ 64 ಸಾವಿರ ರೂ. ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ವಿವಿಧ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ 146443 ಕೋಟಿ ಹಣ ಖರ್ಚು ಮಾಡಿದೆ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಬಿಎ ಅಧ್ಯಕ್ಷ ಕೃಷ್ಣಪ್ಪ, ಬೆಂಗಳೂರು ಉತ್ತರ ವಿಭಾಗದ ಅಧ್ಯಕ್ಷೆ ಲಾವಣ್ಯ ನರಸಿಂಹಮೂರ್ತಿ, ಯಲಹಂಕ, ಹೆಬ್ಬಾಳ, ಬ್ಯಾಟರಾಯನಪುರ ಮತ್ತು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…