Featured

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಲ್ಲಿ ನಕಲಿ ಆಯಪ್‌ ಜಾಗ್ರತೆ ವಹಿಸಲು ಉಡುಪಿ ಎಸ್‌ಪಿ ಸೂಚನೆ – Vishwanews24

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಲ್ಲಿ ನಕಲಿ ಆಯಪ್‌ ಜಾಗ್ರತೆ ವಹಿಸಲು ಉಡುಪಿ ಎಸ್‌ಪಿ ಸೂಚನೆ

ಉಡುಪಿ: ರಾಜ್ಯ ಸರಕಾರದ ಉಚಿತ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್‌ಗಳ ಮೂಲಕ ಸೈಬರ್‌ ಕಳ್ಳರು ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು ಜನಸಾಮಾನ್ಯರು ಎಚ್ಚರ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಹಾಕೆ ಮಚ್ಚಿಂದ್ರ ತಿಳಿಸಿದ್ದಾರೆ.

ಯೋಜನೆಗಳಿಗೆ ಸಂಬಂಧಿಸಿ ಸರಕಾರ ಇದುವರೆಗೂ ಯಾವುದೇ ಆಂಡ್ರಾಯ್ಡ್ ಅಪ್ಲಿಕೇಷನ್‌ ಬಿಡುಗಡೆ ಮಾಡಿರುವುದಿಲ್ಲ. ನಕಲಿ ಆಯಪ್‌ಗ್ಳನ್ನು ಯಾರೂ ಕೂಡ ಮೊಬೈಲ್‌ನಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳಬಾರದು ಮತ್ತು ಸೈಬರ್‌ ಕಳ್ಳರು ಮೆಸೇಜ್‌ ಮೂಲಕ ಹಾಗೂ ವಾಟ್ಸ್‌ಆಯಪ್‌ನಲ್ಲಿ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ಗಳನ್ನು ಬಳಸಬಾರದು.

ಅಂತಹ ಲಿಂಕ್‌ ಕ್ಲಿಕ್‌ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾರಾದರೂ ಕರೆ ಮಾಡಿ “ನೀವು ಈ ಯೋಜನೆಗೆ ಆಯ್ಕೆಯಾಗಿದ್ದೀರಿ’ ಎಂದು ಹೇಳಿ ವೈಯಕ್ತಿಕ ವಿವರಗಳನ್ನು ಬಯಸಿದಲ್ಲಿ ನೀಡಬಾರದು. ಈ ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಬೇಕು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago