ಉಡುಪಿ: ರಾಜ್ಯ ಸರಕಾರದ ಉಚಿತ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್‌ಗಳ ಮೂಲಕ ಸೈಬರ್ ಕಳ್ಳರು ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು ಜನಸಾಮಾನ್ಯರು ಎಚ್ಚರ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ತಿಳಿಸಿದ್ದಾರೆ.
ಯೋಜನೆಗಳಿಗೆ ಸಂಬಂಧಿಸಿ ಸರಕಾರ ಇದುವರೆಗೂ ಯಾವುದೇ ಆಂಡ್ರಾಯ್ಡ್ ಅಪ್ಲಿಕೇಷನ್ ಬಿಡುಗಡೆ ಮಾಡಿರುವುದಿಲ್ಲ. ನಕಲಿ ಆಯಪ್‌ಗ್ಳನ್ನು ಯಾರೂ ಕೂಡ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸ್‌ಆಯಪ್‌ನಲ್ಲಿ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ಗಳನ್ನು ಬಳಸಬಾರದು.
ಅಂತಹ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾರಾದರೂ ಕರೆ ಮಾಡಿ “ನೀವು ಈ ಯೋಜನೆಗೆ ಆಯ್ಕೆಯಾಗಿದ್ದೀರಿ’ ಎಂದು ಹೇಳಿ ವೈಯಕ್ತಿಕ ವಿವರಗಳನ್ನು ಬಯಸಿದಲ್ಲಿ ನೀಡಬಾರದು. ಈ ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಬೇಕು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…