Featured

ಗೃಹಲಕ್ಷ್ಮೀ ದಿಂದ ಬೋರ್ ವೆಲ್ ಕೊರೆಸಿದ ಅತ್ತೆ- ಸೊಸೆ : ಇದು ಎಲ್ಲರಿಗೂ ಮಾದರಿ : ಸಚಿವೆ ಶ್ಲಾಘನೆ – vishwanews24

ಗೃಹಲಕ್ಷ್ಮೀ ದಿಂದ ಬೋರ್ ವೆಲ್ ಕೊರೆಸಿದ ಅತ್ತೆ- ಸೊಸೆ : ಇದು ಎಲ್ಲರಿಗೂ ಮಾದರಿ : ಸಚಿವೆ ಶ್ಲಾಘನೆ

ಬೆಳಗಾವಿ: ಗದಗದ ಅತ್ತೆ-ಸೊಸೆ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ ವ್ಯಕ್ತಪಡಿಸಿದ್ದು, ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ-ಸೊಸೆ ನಡುವೆ ಜಗಳ ಎನ್ನುತ್ತಿದ್ದ ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

 

ಗೃಹಲಕ್ಷ್ಮೀ ಯೋಜನೆಯ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಉತ್ತರ ನೀಡಿದ್ದು, ಗೃಹಲಕ್ಷ್ಮೀ ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ್ದಾರೆ. ಇದು ಎಲ್ಲರಿಗೂ ಮಾದರಿಯಾಗಿದೆ.‌
ಗದಗ ಜಿಲ್ಲೆಯ ಗಜೇಂದ್ರಗಡದ ಅತ್ತೆ, ಸೊಸೆ ಕಾರ್ಯ ನೋಡಿ ತುಂಬಾ ಖುಷಿಯಾಯಿತು. ಗೃಹಲಕ್ಷ್ಮೀ ಯೋಜನೆಯ ಹಣ ಅತ್ತೆಗೊ, ಸೊಸೆಗೊ ಎಂದು ಹೇಳುವ ಮೂಲಕ ವಿರೋಧ ಪಕ್ಷದವರು ಜಗಳ ಸೃಷ್ಟಿಸುವ ಕೆಲಸ ಮಾಡುತ್ತಿದ್ದರು.‌ ಈಗ ಗದಗದ ಈ ಅತ್ತೆ, ಸೊಸೆ ಇಬ್ಬರೂ ಕೂಡಿಟ್ಟ ಹಣದಿಂದ ಬೊರವೆಲ್ ಕೊರೆಸಿ, ಮಾದರಿಯಾಗಿದ್ದಾರೆ ಎಂದರು.

ಗದಗದ ಅತ್ತೆ, ಸೊಸೆ ನಿಜವಾಗಿಯೂ ಆದರ್ಶವಾದಿಗಳಾಗಿದ್ದಾರೆ. ಬೋರ್ ವೆಲ್ ನಿಂದ ನೀರು ಹರಿಸಿ, ವ್ಯವಸಾಯ ಮಾಡುತ್ತಿದ್ದಾರೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡುವ ಸಲುವಾಗಿ ಎರಡು ಸಾವಿರ ಹಣ ಕೊಡಲಾಗುತ್ತಿದೆ. ಈ ರೀತಿಯ ಹಣವನ್ನು ಕೂಡಿಟ್ಟು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವೆ ಮೆಚ್ಚುಗೆ ವ್ಯಕ್ತಪಡಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago