ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ – ಯಾವ ದಾಖಲೆಗಳು ಬೇಕು? ಇಲ್ಲಿದೆ ಮಾಹಿತಿ – Vishwanews24
ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ – ಯಾವ ದಾಖಲೆಗಳು ಬೇಕು? ಇಲ್ಲಿದೆ ಮಾಹಿತಿ
ಬೆಂಗಳೂರು : ರಾಜ್ಯ ಸರ್ಕಾರವು ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇಂದು ಬಿಡಗಡೆ ಮಾಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅರ್ಜಿ ನಮೂನೆ ಬಿಡುಗಡೆ ಮಾಡಿದ್ದು, ಅರ್ಜಿ ನಮೂನೆಯಲ್ಲಿ ಭೌತಿಕ ಅರ್ಜಿ ಸಲ್ಲಿಕೆ ಮಾಡುವುದರ ಬಗ್ಗೆ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ.

ಅರ್ಜಿ ನಮೂನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರವಿದೆ.
ಗೃಹಲಕ್ಷ್ಮೀ ಯೋಜನೆಗೆ ಪತಿ ಆಧಾರ್ ಕಾರ್ಡ್, ವೋಟರ್ ಕಾರ್ಡ್ ಸೇರಿದಂತೆ ಹಲವು ದಾಖಲೆಗಳನ್ನು ಅರ್ಜಿ ನಮೂನೆಯ ಜೊತೆಗೆ ಲಗತ್ತಿಸಬೇಕು ಎಂದು ಸೂಚನೆ ನೀಡಲಾಗಿದೆ.
