ಗೃಹ ಜ್ಯೋತಿ – ಗೃಹ ಲಕ್ಷ್ಮೀ ಯೋಜನೆಗಳ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್‌ : ಪೊಲೀಸ್ ಇಲಾಖೆ ಎಚ್ಚರಿಕೆ – Vishwanews24

Featured, ರಾಜ್ಯ ನ್ಯೂಸ್

ಗೃಹ ಜ್ಯೋತಿ – ಗೃಹ ಲಕ್ಷ್ಮೀ ಯೋಜನೆಗಳ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್‌ : ಪೊಲೀಸ್ ಇಲಾಖೆ ಎಚ್ಚರಿಕೆ

ಬೆಂಗಳೂರು : ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್ ಗಳು ಕಾರ್ಯಾಚರಿಸಲು ಆರಂಭಿಸಿವೆ.

ಈ ನಿಟ್ಟಿನಲ್ಲಿ ಅವುಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್ ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಒಂದ ವೇಳೆ ನೀವು ಇಂತಹ ತಪ್ಪುಗಳನ್ನು ಮಾಡಿದ್ದೇ ಆದಲ್ಲಿ ನಿಮ್ಮ ವೈಯುಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು.

ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ ನಾರಾಯಣಮೂರ್ತಿ ದಂಪತಿ – Vishwanews24

ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಕೂಡ ಯಾವುದೇ ಮಾಹಿತಿ ನೀಡಬಾರದು.

ಸಾರ್ವಜನಿಕರು ಇಂತಹ ನಕಲಿ ಅಪ್ಲಿಕೇಷನ್‌ಗಳ ಮೂಲಕ ತಮ್ಮ ವೈಯುಕ್ತಿಕ ಆಧಾರ್, ಪ್ಯಾನ್ ಕಾರ್ಡ್ ಮಾಹಿತಿ ನೀಡಿ ಮೋಸಹೋಗಬೇಡಿ.

ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರಕಾರವು ಇದುವರೆಗೂ ಯಾವುದೇ ಆಂಡ್ರಾಯ್ಡ್ ಅಪ್ಲಿಕೇಷನ್‌ ಅನ್ನು ಬಿಡುಗಡೆ ಮಾಡಿರುವುದಿಲ್ಲ.

ಈ ಯೋಜನೆಗಳ ನೋಂದಣಿಗಾಗಿ ಸೇವಾ ನಿಂದು ಪೋರ್ಟಲ್ ಗೆ ಭೇಟಿ ನೀಡಿ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಡುವಾಗ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕ ಮೃತ್ಯು – Vishwanews24

Leave a Reply