Featured

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ

ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಫಲಾನುಭವಿಯ ಪ್ರವರ್ಗ ಕುರಿತು ಕೇಳಿರುವ ಮಾಹಿತಿ ಕಡ್ಡಾಯವಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್ ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್ ಹಾಗೂ ಮುದ್ರಿತ ಘೋಷನಾ ಪತ್ರದ ಮೂಲಕ ಮಾಹಿತಿಯನ್ನು ಗೃಹ ಫಲಾನುಭವಿಗಳ ಮನೆಗೆ ತೆರಳಿ ಕಲೆ ಹಾಕುತ್ತಿದ್ದು, ಫಲಾನುಭವಿಯ ಪ್ರವರ್ಗದ (ಜಾತಿ ಪ್ರಮಾಣಪತ್ರ) ಸಂಬಂಧಿಸಿದ ಮಾಹಿತಿ ಕೇವಲ ಐಚ್ಛಿಕವಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

ಫಲಾನುಭವಿಗಳ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಪ್ರಶ್ನೆಗೆ ಸಂಬಂಧಿಸಿದಂತೆ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ.

ಫಲಾನುಭವಿಗಳಿಗೆ ಜಾತಿ ಮಾಹಿತಿ ನೀಡಲು ಇಷ್ಟವಿಲ್ಲದಿದ್ದರೆ ಮೊಬೈಲ್ ಅಪ್ಲಿಕೇಷನ್ ನಲ್ಲಿರುವ ʼಮಾಹಿತಿ ನೀಡಲು ನಿರಾಕರಣೆʼ ಎಂಬ ಆಯ್ಕೆಯನ್ನು ನಮೂದಿಸಲು ಸಿಬ್ಬಂದಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

1 day ago